• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳದಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಬಿಜೆಪಿಯ ಮತ್ತೋರ್ವ ನಾಯಕ ದೀದಿ ತೆಕ್ಕೆಗೆ.!

ಕರ್ಣ by ಕರ್ಣ
September 19, 2021
in ದೇಶ
0
ಪಶ್ಚಿಮ ಬಂಗಾಳದಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಬಿಜೆಪಿಯ ಮತ್ತೋರ್ವ ನಾಯಕ ದೀದಿ ತೆಕ್ಕೆಗೆ.!
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರೀಯೊ ಅವರು ಇಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷ ಸೇರ್ಪಡೆಯಾದರು. ಸುಪ್ರೀಯೋ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸದಸ್ಯರಾದ ಡೆರೆಕ್ ಓಬ್ರೇನ್​ ಉಪಸ್ಥಿತರಿದ್ದರು.
ತೃಣಮೂಲ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದು ಪೋಸ್ಟ್ ಮಾಡಲಾಗಿದೆ. “ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹಾಗೂ ರಾಜ್ಯಸಭಾ ಸದಸ್ಯ ದೀರಕ್ ಒಬ್ರೇನ್ ಉಪಸ್ಥಿತಿಯಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಸಂಸದ ಸುಪ್ರೀಯೊ ಬಾಬುಲ್ ಅವರು ಟಿಎಂಸಿ ಕುಟುಂಬ ಸೇರ್ಪಡೆಯಾಗಿದ್ದಾರೆ. ಅವರಿಗೆ ನಾವು ತುಂಬು ಹೃದಯದ ಸ್ವಾಗತ ಕೋರುತ್ತೇವೆ” ಎಂದು ಟ್ವೀಟ್ ಮಾಡಲಾಗಿದೆ.

ADVERTISEMENT

ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ.!!

ಸೆಪ್ಟೆಂಬರ್ 4ರಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಸೌಮೆನ್ ರಾಯ್ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಗೆ ಸೇರಿದ್ದರು. ಕಲಿಯಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸೌಮೆನ್ ರಾಯ್ ಅವರು ಈ ಹಿಂದೆ ಟಿಎಂಸಿಯ ಸದಸ್ಯರಾಗಿದ್ದರು. ಆ ಬಳಿಕ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಅದಾದ ಬಳಿಕ ಮತ್ತೆ ಟಿಎಂಸಿಗೆ ಮತ್ತೆ ಬಂದಿದ್ದರು. ಸೌಮೆನ್ ರಾಯ್ ಟಿಎಂಸಿಗೆ ಸೇರಿದ ನಂತರ, ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯೆ 71 ಕ್ಕೆ ಇಳಿದಿದೆ. ಕಳೆದ ನಾಲ್ಕು ವಾರಗಳಲ್ಲಿ, ನಾಲ್ಕು ಬಿಜೆಪಿ ಶಾಸಕರು ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಸಂಸದರಾಗಿರುವ ಸುಪ್ರೀಯೋ ಬಾಬುಲ್ ಅವರು ಬಿಜೆಪಿ ತೊರೆದು ಟಿಎಂಸಿ ಸೇರ್ಪಡೆಯಾಗಿದ್ದಾರೆ. 

Today, in the presence of National General Secretary @abhishekaitc and RS MP @derekobrienmp, former Union Minister and sitting MP @SuPriyoBabul joined the Trinamool family.

We take this opportunity to extend a very warm welcome to him! pic.twitter.com/6OEeEz5OGj

— All India Trinamool Congress (@AITCofficial) September 18, 2021


ದೀದಿ ನಾಡಲ್ಲಿ ಪಕ್ಷಾಂತರ ಪರ್ವ..!!


ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲೇಬೇಕು ಎಂದು ಹಠ ತೊಟ್ಟಿದ್ದ ಬಿಜೆಪಿ ಪಕ್ಷ ವಿಧಾನ ಸಭಾ ಚುನಾವಣೆಗೆ ಮುಂಚೆಯೇ ಅನೇಕ ಟಿಎಂಸಿ ಶಾಸಕರು- ಸಚಿವರನ್ನು  ಹೈಜಾಕ್ ಮಾಡಿತ್ತು. ಆದರೂ ಸಹ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನ ಗಳಿಸಲು ಸಾಧ್ಯವಾಗಿಲ್ಲ. ಪರಿಣಾಮ ಟಿಎಂಸಿ ಮತ್ತೆ ಅಧಿಕಾರ ಹಿಡಿಯಿತು. ಮಮತಾ ಬ್ಯಾನರ್ಜಿ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿತ್ತು. ಅನೇಕ ಬಿಜೆಪಿ ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಒಬ್ಬರ ಹಿಂದೆ ಒಬ್ಬರಂತೆ ಟಿಎಂಸಿ ಸೇರ್ಪಡೆಯಾಗುತ್ತಿದ್ದಾರೆ.


ಅಷ್ಟೇ ಅಲ್ಲದೇ, ಬಿಜೆಪಿಯ ಹಿರಿಯ ನಾಯಕ ಯಶವಂತ ಸಿನ್ಹಾ ಅವರು ಸಹ ಬಿಜೆಪಿ ತೊರೆದು ಟಿಎಂಸಿ ಸೇರ್ಪಡೆಯಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರ ಮತ್ತು ಹಣಕಾಸು ಸಚಿವರಾಗಿ ಕೆಲಸ ಮಾಡಿದ್ದ ಯಶವಂತ್ ಸಿನ್ಹಾ ಅವರು ವಾಜಪೇಯಿ ಹಾಗೂ ಲಾಲಕೃಷ್ಣ ಅಡ್ವಾಣಿ ಅವರ ನಿಕಟವರ್ತಿಯಾಗಿದ್ದರು. ಆದರೆ 2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದಾಗಿನಿಂದಲೂ ಅವರನ್ನು ನಿರ್ಲಕ್ಷ್ಯ ಮಾಡಲಾಗಿತ್ತು.‌‌ ವಿಶೇಷವಾಗಿ ಒಬ್ಬ ಮಾಜಿ ಹಣಕಾಸು ಸಚಿವನಾಗಿ ಯಶವಂತ ಸಿನ್ಹಾ ಬಿಜೆಪಿ ಸರ್ಕಾರದ ಆರ್ಥಿಕ ನೀತಿಗಳ‌ ಬಗ್ಗೆ ಮಾಡಿದ ಸಕಾರಾತ್ಮಕ ಟೀಕೆಗಳನ್ನು ಸದ್ಯದ ಬಿಜೆಪಿ ಪಕ್ಷ ಸಹಿಸಿಕೊಳ್ಳಿಲ್ಲ. ಇದರಿಂದಾಗಿ ಯಶವಂತ ಸಿನ್ಹ ಮತ್ತು ಬಿಜೆಪಿ ನಡುವಿನ ಸಂಬಂಧ ದಿನೇ ದಿನೇ ಹದಗೆಟ್ಟು 2018ರಲ್ಲಿ ಅವರು ಬಿಜೆಪಿಯನ್ನು ತೊರೆದಿದ್ದರು.

Previous Post

‘ಸಾವರ್ಕರ್: ಅ ಕಂಟೆಸ್ಟೆಡ್ ಲೆಗಸಿ, 1924-1966’ ಪುಸ್ತಕದ ಪುನರಾವಲೋಕನ: ಹಿಂದುತ್ವದ ಅತೀ ದೊಡ್ಡ ಸಿದ್ಧಾಂತಪುರುಷ

Next Post

ಕೋವಿಡ್ ಲಸಿಕೆ ಪಡೆದುಕೊಂಡವರ ರೋಗ ನಿರೋಧಕ ಶಕ್ತಿ ಗಮನಾರ್ಹ ಏರಿಕೆ: ಅಧ್ಯಯನ

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ಕೋವಿಡ್ ಲಸಿಕೆ ಪಡೆದುಕೊಂಡವರ ರೋಗ ನಿರೋಧಕ ಶಕ್ತಿ ಗಮನಾರ್ಹ ಏರಿಕೆ: ಅಧ್ಯಯನ

ಕೋವಿಡ್ ಲಸಿಕೆ ಪಡೆದುಕೊಂಡವರ ರೋಗ ನಿರೋಧಕ ಶಕ್ತಿ ಗಮನಾರ್ಹ ಏರಿಕೆ: ಅಧ್ಯಯನ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada