ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯುವ ಹಿನ್ನೆಲೆ ನಾಲ್ಕು ದಿನ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಬುಧವಾರ (ಸೆಪ್ಟೆಂಬರ್ 6) ಆದೇಶಿಸಿದ್ದಾರೆ.
ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ.
ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್ಶಾಪ್/ಬಾರ್ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.