ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಉಸಿರಾಟ ಸಮಸ್ಯೆಯಿಂದ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಏಮ್ಸ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ನಾಯಕರು ಆಗಮಿಸಿದ್ದಾರೆ.
ಬೆಳಗಾವಿಯಲ್ಲಿ ಗಾಂಧಿ ಭಾರತಕ್ಕೆ ಆಗಮಿಸಿದ್ದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ದೆಹಲಿಗೆ ಹೊರಟಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಬಹುತೇಕ ನಾಯಕರು ಕೂಡ ದೆಹಲಿಗೆ ತೆರಳುತ್ತಿದ್ದಾರೆ. ಜೊತೆಗೆ ಶುಕ್ರವಾರದ ಎಲ್ಲಾ ಕಾರ್ಯಕ್ರಮಗಳ ಮುಂದೂಡಿಕೆ ಮಾಡಿದ್ದು, ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ಮಾಜಿ ಪ್ರಧಾನಿ ಮನಮೋಹನ ಸಿಂಗ್ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆಗೆ ಆದೇಶ ಮಾಡಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ರಾಜ್ಯ ಸರ್ಕಾರದ ಆದೇಶ