• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಬಂಧನವಾಗಲಿದೆ.

ಪ್ರತಿಧ್ವನಿ by ಪ್ರತಿಧ್ವನಿ
December 23, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಬಂಧನವಾಗಲಿದೆ. ಹೀಗಾಗಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಹೈಕೋರ್ಟ್ ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೆ ಸಿಐಡಿ ಅಧಿಕಾರಿಗಳು ಬೈರತಿ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಪ್ರಕರಣ ಸಂಬಂಧ ಇದುವರೆಗೂ ಸಿಐಡಿಯಿಂದ ಬಸವರಾಜ್ ವಿಚಾರಣೆ ಆಗಿಲ್ಲ.

ಇನ್ನೂ ಆರೋಪಿಗಳ ಜೊತೆ ನಿಕಟ ಸಂಪರ್ಕದಲ್ಲಿ ಇರುವ ಬಗ್ಗೆ ಸಾಕ್ಷಿಗಳು ಪತ್ತೆಯಾಗಿವೆ. ಇಬ್ಬರು ಅಂದ್ರೆ ಎ1 ಜಗ್ಗ ಮತ್ತು ಭೈರತಿ ಒಂದೇ ಲೋಕೆಷನ್‌ನಲ್ಲಿ ಇರುವುದು ಅಧಿಕಾರಿಗಳಿಗೆ ಪತ್ತೆಯಾಗಿದೆ. ಅಲ್ಲದೆ ಎ20 ಮಲಯಾಳಿ ಅಜೀತ್ ಜೊತೆ ಕೂಡ ಪರ್ಸನಲ್ ಸೆಕ್ರೆಟರಿ ಮೊಬೈಲ್ ಮೂಲಕ ಮಾತನಾಡಿದ್ದಾರೆ. ಹೀಗಾಗಿ ಆರೋಪಿಗೆ ಯಾವುದೇ ರಕ್ಷಣೆ ನೀಡಬಾರದು. ಕಸ್ಟೋಡಿಯಲ್ ಇಂಟ್ರಾಗೇಷನ್ ಅಗತ್ಯವಿದೆ. ಎಲ್ಲಾ ಆರೋಪಿಗಳು ಒಳಸಂಚು ಮಾಡಿದ್ದಾರೆ. ಕೇವಲ ಒಂದು ಪೋಟೊ ಆಧರಿಸಿ ತನಿಖೆ ನಡೆಸಿಲ್ಲ, ಇನ್ನು ಹಲವು ಅಂಶಗಳನ್ನ ಇಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ.‌ ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಲಾಗಿದೆ.

ಈ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ ಆಗುವ ಮೊದಲು ಭಾರತಿನಗರ ಪೊಲೀಸರ ಎದುರು ವಿಚಾರಣೆ ಎದುರಿಸಿದ್ದಾರೆ. ಅಲ್ಲದೆ ಪ್ರಕರಣದ ತನಿಖೆ ಕೂಡ ನಡೆದಿದ್ದು, ಸದ್ಯ ಸಿಐಡಿಯಲ್ಲಿಈ ಕೇಸ್‌ ತನಿಖೆ ಮುಂದುವರೆದಿದೆ. ಆದರೆ ರಿಮ್ಯಾಂಡ್, ಹಾಗೂ ಕೋಕಾ ಕಾಯ್ದೆ ಅಳವಡಿಸಿದಾಗಲೂ ಕೂಡ ಭೈರತಿ ಮೇಲೆ ಯಾವುದೇ ಆರೋಪ ಬಂದಿಲ್ಲ. ಹೀಗಿದ್ದಾಗಲೂ ಸಹ ಕಸ್ಟೋಡಿಯಲ್ ವಿಚಾರಣೆಗೆ ಮನವಿ ಮಾಡುತ್ತಿರುವುದು ಸರಿಯಲ್ಲ. ಹೀಗಾಗಿ ಭೈರತಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿರುವ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕೋರ್ಟ್‌ ಆದೇಶದ ಬೆನ್ನಲ್ಲೇ ಬಿಜೆಪಿ ಶಾಸಕನಿಗೆ ಬಂಧನದ ಭೀತಿ ಶುರುವಾಗಿದ್ದು, ಯಾವುದೇ ಕ್ಷಣದಲ್ಲಿಯೂ ಭೈರತಿ ಬಸವರಾಜ್‌ ಬಂಧನವಾಗುವ ಸಾಧ್ಯತೆಗಳು ದಟ್ಟವಾಗಿವೆ. ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಇತರ ಹೊರರಾಜ್ಯಗಳಲ್ಲೂ ಸಿಐಡಿ ಅಧಿಕಾರಿಗಳ 3 ತಂಡಗಳು ಶಾಸಕ ಭೈರತಿ ಬಸವರಾಜ್‌ ಹುಡುಕಾಟದಲ್ಲಿ ಫುಲ್ ಆಕ್ಟಿವ್ ಆಗಿವೆ. ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೆ ಭೈರತಿ ಎಸ್ಕೇಪ್ ಆಗಿದ್ದರು.

Tags: bjp mla byrathi basavarajbyrathi basavarajbyrathi basavaraj arrestbyrathi basavaraj arrest newsbyrathi basavaraj bail newsbyrathi basavaraj bail rejectbyrathi basavaraj bjpbyrathi basavaraj casebyrathi basavaraj case newsbyrathi basavaraj cidbyrathi basavaraj courtbyrathi basavaraj latest newsbyrathi basavaraj legal casebyrathi basavaraj newsbyrathi basavaraj relativebyrathi basavaraj speechbyrathi basavaraj today newsfir against byrathi basavarajmla byrathi basavaraj fir
Previous Post

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

Next Post

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada