ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರನ್ನು ನೇಮಿಸಿ ರಾಜ್ಯ ಸರ್ಕಾರಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಖಾತೆ ಸಚಿವರಾಗಿರುವ ಬೈರತಿ ಬಸವರಾಜ ಅವರಿಗೆ ದಾವಣಗೆರೆ ಜತೆಗೆ ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹೊಣೆ ನೀಡಲಾಗಿದೆ. ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆ ತತ್ತರಿಸಿದ್ದು ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ನೇಮಕವಾಗಿದೆ.

ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಯಾರು ಇರಲಿಲ್ಲ. ಇದೀಗ ಭೈರತಿ ಬಸವರಾಜ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರ ಸಚಿವರನ್ನಾಗಿ ನೇಮಕ ಮಾಡಲಾಗಿದೆ.