ಜಾತಿನಿಂದನೆ ಹಾಗು ಕೊಲೆ ಬೆದರಿಕೆ ಕೇಸ್‌ನಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಆಗಿದೆ. ಇಬ್ಬರು ಶ್ಯೂರಿಟಿ, ಎರಡು ಲಕ್ಷ ಬಾಂಡ್ ಆಧಾರದಲ್ಲಿ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ. ಸದ್ಯ ಎರಡು ಪ್ರಕರಣಗಳಲ್ಲಿ ಮುನಿರತ್ನ ಜಾಮೀನು ಪಡೆದಿದ್ದಾರೆ. ವೇಲ್ಕು ನಾಯ್ಕರ್ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣ ಹಾಗು ನಿನ್ನೆ ವಂಚನೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರು..

ಈ ನಡುವೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ MLC ಸಲೀಂ ಅಹಮದ್, ಮಾಜಿ MLC ನಾರಾಯಣಸ್ವಾಮಿ ಹಾಗು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದರು. ಮುನಿರತ್ನ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಜಾತಿನಿಂದನೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಮೈಸೂರಿನ ಟೌನ್ ಹಾಲ್ ಮುಂಭಾಗ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ಮಾಡಿದೆ. ಮುನಿರತ್ನ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದ್ದಾರೆ. ಡಿಎಸ್ಎಸ್ ಮುಖಂಡ ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.