ಸಿಗರೇಟ್ ಕೇಳುವ ನೆಪದಲ್ಲಿ ಬೇಕರಿಯವರ ಜೊತೆ ಕ್ಷುಲಕ ವಿಚಾರಕ್ಕೆ ತಗಾದೆ ತೆಗೆದು ಪುಂಡರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಹೆಚ್.ಎ.ಎಲ್‌ನ ಕುಂದನಹಳ್ಳಿಯಲ್ಲಿ ನಡೆದಿದೆ.
ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಘಟನೆ ಕುರಿತಂತೆ ಸಾಕಷ್ಟು ಖಂಡನೆ ವ್ಯಕ್ತವಾಗುತ್ತಿದೆ.

ಮೊದಲಿಗೆ ಬೇಕರಿ ಬಳಿ ಬಂದ ಆರೋಪಿಗಳು ಸಿಗರೇಟ್ ಕೇಳುವ ನೆಪದಲ್ಲಿ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರ ಜೊತೆ ಕ್ಷುಲಕ ಕಾರಣಕ್ಕೆ ತಗಾದೆ ತೆಗೆದು ಮಾತಿಗೆ ಮಾತು ಬೆಳೆಸಿದ್ದಾರೆ.
ಈ ವೇಳೆ ಪುಂಡರ ಗುಂಪು ಊರ್ ಬಿಟ್ಟು ಊರ್ ಬಂದಿದ್ದೀರಾ, ನಮ್ಗೆ ಆವಾಜ್ ಹಾಕ್ತಿರಾ ಎಂದು ಹೇಳಿ ಸಿಕ್ಕಸಿಕ್ಕ ವಸ್ತುಗಳನ್ನ ಚೆಲ್ಲಾಡಿ ಬೇಕರಿಯಲ್ಲಿದ್ದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.












