Odisha Train accident : ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿ, ನಾವು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದಿದ್ದಾರೆ.


ರಾಜ್ಯ ಸರ್ಕಾರದ ಸಹಾಯದಿಂದ, ಬಾಲಸೋರ್, ಕಟಕ್ ಮತ್ತು ಭುವನೇಶ್ವರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಗೊಂಡ ರೋಗಿಗಳಿಗೆ ಕೇಂದ್ರವು ಸಾಧ್ಯವಿರುವ ಎಲ್ಲ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.






