ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್‌ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಕರೆ ನೀಡಿದೆ. ಹೀಗಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದ ಸಮಿತಿಯಲ್ಲಿ ಸಭೆ ನಡೆದಿದೆ.
ಇದರ ನಡುವೆ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ನಿಮಿತ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಂದ್ ಬಿಸಿ ತಟ್ಟಿಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್‌ಗೆ ಖಾಸಗಿ ಶಾಲೆಗಳಿಂದ ಸಂಪೂರ್ಣ ಬೆಂಬಲ ಇದೆ. ನಾವೆಲ್ಲರೂ ಸೇರಿ ಖಾಸಗಿ ಶಾಲಾ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿ ಕಪ್ಪು ಪಟ್ಟಿ ಧರಿಸುತ್ತೇವೆ. ಬುಧವಾರ ಹಾಗೂ ಗುರುವಾರ ಮಕ್ಕಳಿಗೆ ಪರೀಕ್ಷೆ ಇರೋ ಹಿನ್ನೆಲೆಯಲ್ಲಿ ರಜೆ ಘೋಷಣೆ ಕಷ್ಟ ಸಾಧ್ಯ. ಈ ಹಿನ್ನಲೆ ನೈತಿಕ ಬೆಂಬಲಕ್ಕೆ ಸೂಚನೆಗೆ ಕೊಡಲಾಗುವುದು ಎಂದರು.