ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಕೂಡ ಇಂದು ಹಲವೆಡೆ ಮಳೆಯಾಗಿದ್ದು ಇನ್ಬೆರಡು ದಿನಗಳ ಕಾಲ ಮಳೆ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿತ್ತು ಅದರಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಾ.20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಮಾ.20 ಮತ್ತು ಮಾ.21ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ತಜ್ಞರ ಪ್ರಕಾರ, ಚಂಡಮಾರುತ ಪರಿಣಾಮ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಅಗಲಿದ್ದು, ಅಂಡಮಾನ್ ನಿಕೋಬಾರ್‌ನ ಪೂರ್ವಭಾಗದಿಂದ ಆರಂಭವಾಗುವ ಚಂಡಮಾರುತ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಉತ್ತರ ಕರಾವಳಿಯತ್ತ ಚಲಿಸಲಿವೆ. ಮಾ.22ರಂದು ಈ ಎರಡು ದೇಶಗಳ ತೀರಕ್ಕೆ ಅಪ್ಪಳಿಸಲಿದೆ ಎಂದರು.