ಬೆಂಗಳೂರು ನಗರದ(Bangalore city) ಲೋಕಸಭಾ ಕ್ಷೇತ್ರಗಳನ್ನ ಗೆಲ್ಲಲ್ಲೇಬೇಕೆಂದು ಸಿಎಂ, ಡಿಸಿಎಂ (Cm-Dcm) ಪಣ ತೊಟ್ಟಿದ್ದಾರೆ. ಇಂದು ಬೆಂಗಳೂರು ಉತ್ತರ (Bangalore north) ಹಾಗೂ ಬೆಂಗಳೂರು ದಕ್ಷಿಣ (Bangalore south) ಲೋಕಸಭಾ ಕ್ಷೇತ್ರಗಳಲ್ಲಿ ಭರ್ಜರಿ ರೋಡ್ ಶೋ ಗೆ(Road show) ಸಿದ್ಧತೆಗಳು ನಡೆದಿವೆ.

ನಿನ್ನೆ ಕೋಲಾರದ (Kolar) ಕುರುಡುಮಲೆಯ ಗಣಪನ ಸನ್ನಿಧಿಯಲ್ಲಿ ಚುನಾವಣೆ ಪ್ರಚಾರಕ್ಕೆ ರಾಜ್ಯ ಕಾಂಗ್ರೆಸ್ ಘಟಕ ಅಧಿಕೃತ ಚಾಲನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಇಂದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತಯಾಚನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ (Siddaramaiah) ಮತ ಭೇಟಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK shivakumar) ಸೇರಿ ಹಲವು ಸಚಿವರೂ ಕೂಡ ಸಾಥ್ ನೀಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಿಎಂ ಚುನಾವಣಾ ಪ್ರಚಾರ, ಸಂಜೆ 6 ಗಂಟೆವರೆಗೆ ನಡೆಯಲಿದೆ. ಇಡೀ ದಿನ ಬೆಂಗಳೂರು ಕ್ಷೇತ್ರಗಳ ಪ್ರಚಾರಕ್ಕಾಗಿಯೇ ಮೀಸಲಿಟ್ಟಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಾದ ದಾಸರಹಳ್ಳಿ, ಬ್ಯಾಟರಾಯನಪುರ, ಮಲ್ಲೇಶ್ವರ, ಮಹಾಲಕ್ಷ್ಮಿ ಲೇಔಟ್, ಪದ್ಮನಾಭ ನಗರ ಹಾಗೂ ಬೊಮ್ಮನಹಳ್ಳಿ ಭಾಗಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಣಕಹಳೆ ಮೊಳಗಿಸಲಿದ್ದಾರೆ.