• Home
  • About Us
  • ಕರ್ನಾಟಕ
Thursday, July 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇತರೆ / Others, ಕರ್ನಾಟಕ
0
ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಮುಂದಿನ ದಿನಗಳಲ್ಲಿ ಹೊಸ ಮೆಟ್ರೊ ಮಾರ್ಗಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬುಧವಾರ ಜಯನಗರದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‍ವರೆಗೆ ಡಬಲ್ ಡೆಕ್ಕರ್ ಮಾರ್ಗದಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ADVERTISEMENT

ಇಂದಿನ ದಿನಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದು ಕಷ್ಟದ ಕೆಲಸ. ಆದರೆ, ಡಬಲ್ ಡೆಕ್ಕರ್ ಮಾದರಿಯಿಂದ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಉಪಯೋಗಗಳಿವೆ. ಹೆಚ್ಚು ಖರ್ಚಾದರೂ ಈ ಮಾದರಿ ಬೆಂಗಳೂರಿಗೆ ಅನುಕೂಲ. ಪ್ರಸ್ತುತ 5 ಕಾಲು ಕಿ.ಮೀ ಉದ್ದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಸುಮಾರು 450 ಕೋಟಿ ರೂ.ಖರ್ಚಾಗಿದೆ ಎಂದರು.

ಬೆಂಗಳೂರಿನ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್'ವರೆಗೆ ನಿರ್ಮಾಣವಾಗಿರುವ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್'ನ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ನೀಡಿ, ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದೆ.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಹೊಸ ಮಾದರಿಯಲ್ಲಿ ನಗರದ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು 450 ಕೋಟಿ ರೂಪಾಯಿ… pic.twitter.com/3E8jENNq8C

— DK Shivakumar (@DKShivakumar) July 17, 2024

ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್ ಫ್ರೀ ಕಾರಿಡಾರ್ ಮಾಡಲು 120ರಿಂದ150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ. ಬಿಬಿಎಂಪಿ ಮತ್ತು ಬಿಎಂಆರ್ ಸಿಎಲ್ ಈ ಯೋಜನೆಯ ವೆಚ್ಚವನ್ನು ಹಂಚಿಕೊಳ್ಳುತ್ತಾರೆ ಎಂದು ವಿವರಿಸಿದರು.ಇನ್ನೂ, ಹೊಸೂರು ರಸ್ತೆ ಕಡೆ ತೆರಳುವ ಸುಮಾರು ಶೇ.30 ರಷ್ಟು ನಾಗರೀಕರಿಗೆ ಡಬಲ್ ಡೆಕ್ಕರ್ ನಿಂದ ಉಪಯೋಗವಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಎಚ್‍ಎಸ್‍ಆರ್ ಲೇಔಟ್, ಮಹದೇವಪುರ ವಾಸಿಗಳಿಗೆ ಬಹಳ ಅನುಕೂಲವಾಗಲಿದೆ. 5 ಪಥಗಳುಳ್ಳ ಸುಮಾರು 9.5 ಕಿಮೀ ಉದ್ದವಿರುವ 5,745 ಕೋಟಿ ವೆಚ್ಚದಲ್ಲಿ ಆರ್ ವಿ ನಗರ ಮಹದೇವಪುರ ಎಲಿವೇಟೆಡ್ ಪೇಸ್ 2 ಯೋಜನೆಯನ್ನು ಜಾರಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದೂ ಅವರು ಉಲ್ಲೇಖಿಸಿದರು.

ಡಬಲ್ ಡೆಕ್ಕರ್ ಮಾದರಿಯನ್ನು ಅಧ್ಯಯನ ಮಾಡಲು ರಾಜ್ಯದಿಂದ ಅಧಿಕಾರಿಗಳ ತಂಡವನ್ನು ನಾಗ್ಪುರಕ್ಕೆ ಕಳುಹಿಸಿದ್ದೆ. ಡಬಲ್ ಡೆಕ್ಕರ್ ನಿರ್ಮಾಣವಾಗಲು ಹಿಂದೆ ಇರುವ ಶಕ್ತಿ ಸಚಿವ ರಾಮಲಿಂಗಾರೆಡ್ಡಿ ಆಗಿದ್ದು, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿಯಾದರೂ ಅದನ್ನು ರಾಮಲಿಂಗಾರೆಡ್ಡಿ ಮಾಡೆಲ್ ಎಂದು ಹೇಳುತ್ತೇನೆ ಎಂದ ಅವರು, ಡಬಲ್ ಡೆಕ್ಕರ್ ಯೋಜನೆಯ ಉಪಯೋಗ ತಿಳಿಯಲು ಜನರು ಮೇಲೆ ಹಾಗೂ ಕೆಳಗೆ ಸಂಚರಿಸಿ ಅನುಭವ ಪಡೆಯಬೇಕು. ಈ ಯೋಜನೆ ವೀಕ್ಷಿಸಲು ನೂತನ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೂ ಮನವಿ ಮಾಡಲಾಗುವುದು. ಪ್ರಾಯೋಗಿಕ ಸಂಚಾರ ನಡೆಸಿದ ಮೇಲೆ ಒಂದಷ್ಟು ಕುಂದುಕೊರತೆಗಳು ತಿಳಿಯುತ್ತವೆ. ಇದೆಲ್ಲವನ್ನು ಬಗೆಹರಿಸಿ ಜನರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ, ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ದಕ್ಷಿಣ ಭಾರತದ ಮೊದಲ ರೋಡ್-ಕಮ್-ಮೆಟ್ರೋ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸಿ ಸ್ವತಃ ಕಾರ್ ಡ್ರೈವ್ ಮಾಡಿದೆ. ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಸಂಪರ್ಕಿಸುವ ಈ ಅತ್ಯಾಧುನಿಕ ಫ್ಲೈಓವರ್ ನಗರದ ಚಲನಶೀಲತೆಗೆ ಹೊಸ ಭಾಷ್ಯ ಬರೆದಿದೆ ಎಂದರೆ ತಪ್ಪಾಗಲಾರದು.#BrandBengaluru #DoubleDeckerFlyover pic.twitter.com/c3L4e6PrYb

— DK Shivakumar (@DKShivakumar) July 17, 2024

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'CM Siddaramaiah‌Congress PartyDCM D.K ShivakumarMinister Ramlinga Reddy
Previous Post

ಹೆಚ್ಚುತ್ತಿರುವ ಮುಸ್ಲಿಮರ ಜನಸಂಖ್ಯೆ ಜೀವನ ಮತ್ತು ಸಾವಿನ ವಿಷಯ ಎಂದ ಅಸ್ಸಾಂ ಮುಖ್ಯ ಮಂತ್ರಿ

Next Post

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

Related Posts

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು
Top Story

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

by ಪ್ರತಿಧ್ವನಿ
July 17, 2025
0

-----ನಾ ದಿವಾಕರ---- ಸ್ಥಳಗಳಿಗೆ ಹೊಸ ಹೆಸರಿಸುವ ಪರಂಪರೆಗೆ ಪ್ರಜಾತಂತ್ರದ ಸ್ಪರ್ಶ ಇರಬೇಕು ಭಾರತದ ರಾಜಕಾರಣದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಊರುಗಳ, ನಗರಗಳ ಮತ್ತು ರಸ್ತೆ-ವೃತ್ತಗಳ ಹೆಸರುಗಳನ್ನು...

Read moreDetails
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

July 16, 2025

Basavaraj Bommai: ಜಿಟಿಟಿಸಿ ತರಬೇತಿ ಪಡೆಯುವವರಿಗೆ ಒಳ್ಳೆಯ ಭವಿಷ್ಯವಿದೆ..

July 16, 2025

CM Siddaramaiah: ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಕ್ಕೆ ಅಭಿನಂದಿಸಿದ ಸಿಎಂ.

July 16, 2025

Just Married: ಜನಮನಸೂರೆಗೊಳ್ಳುತ್ತಿದೆ “ಜಸ್ಟ್ ಮ್ಯಾರೀಡ್” ಚಿತ್ರದ “ಮಾಂಗಲ್ಯಂ ತಂತು ನಾನೇನಾ” ಹಾಡು .

July 16, 2025
Next Post
ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

Recent News

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು
Top Story

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

by ಪ್ರತಿಧ್ವನಿ
July 17, 2025
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?
Top Story

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

by ಪ್ರತಿಧ್ವನಿ
July 16, 2025
Top Story

CM Siddaramaiah: ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಕ್ಕೆ ಅಭಿನಂದಿಸಿದ ಸಿಎಂ.

by ಪ್ರತಿಧ್ವನಿ
July 16, 2025
Top Story

Just Married: ಜನಮನಸೂರೆಗೊಳ್ಳುತ್ತಿದೆ “ಜಸ್ಟ್ ಮ್ಯಾರೀಡ್” ಚಿತ್ರದ “ಮಾಂಗಲ್ಯಂ ತಂತು ನಾನೇನಾ” ಹಾಡು .

by ಪ್ರತಿಧ್ವನಿ
July 16, 2025
ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ
Top Story

ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ

by ಪ್ರತಿಧ್ವನಿ
July 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

July 17, 2025
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

July 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada