ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ವಶಕ್ಕೆ ಪಡೆದಿದೆ.
ಜಮೀನು ವ್ಯಾಜ್ಯವನ್ನ ಬಗೆಹರಿಸುವುದಾಗಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 5 ಲಕ್ಷ ರೂಪಾಯಿ ಪಡೆಯುವ ಸಮಯದಲ್ಲಿ ಎಸಿಬಿ ಬಲೆಗೆ ಜೆ. ಮಂಜುನಾಥ್ ಬಿದ್ದಿದ್ದರು.
ತನಿಖೆ ಕುಂಟುತ್ತಾ ಸಾಗಿದ್ದನ್ನು ಪ್ರಶ್ನಿಸಿದ ನ್ಯಾಯಾಲಯ ಎಸಿಬಿಗೆ ಛೀಮಾರಿ ಹಾಕಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಮೂರನೇ ಆರೋಪಿಯಾಗಿರುವ ಮಂಜುನಾಥ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
