ಬೆಂಗಳೂರಲ್ಲಿ ಕಸ ಸಂಗ್ರಹಣೆಗೆ ಬಿಬಿಎಂಪಿ ಶುಲ್ಕ ವಸೂಲಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ಮನೆ ಮನೆಯಿಂದ ಕಸ ಸಂಗ್ರಹಿಸಲು ಶುಲ್ಕ ವಸೂಲಿ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಕೆ ಮಾಡಿದೆ.
2025 ರಿಂದ ಕಸ ಶುಲ್ಕ ವಸೂಲಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯಿಂದ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಬೆಂಗಳೂರಿನ 46 ಲಕ್ಷ ಮನೆಗಳಿಂದ ಶುಲ್ಕ ವಸೂಲಿ ಸಂಗ್ರಹಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, 2025 – 26ನೇ ಆರ್ಥಿಕ ವರ್ಷದಿಂದ ಈ ಮಾದರಿಯ ಶುಲ್ಕ ವಸೂಲಾತಿಗೆ ನಿರ್ಧಾರ ಮಾಡಿದ್ದು, ಬಿಬಿಎಂಪಿ ಪ್ರಸ್ತಾವನೆಗೆ ಸರ್ಕಾರ ಸದ್ಯಕ್ಕೆ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ.
ಪ್ರತಿ ತಿಂಗಳು 200 ರಿಂದ 400 ರೂಪಾಯಿ ಶುಲ್ಕ ನಿಗದಿ ಮಾಡುವ ಪ್ರಸ್ತಾವನೆ ಇದಾಗಿದೆ. ಆಸ್ತಿ ತೆರಿಗೆ ಜೊತೆಗೆ ಕಸದ ಶುಲ್ಕವನ್ನ ಸಂಗ್ರಹ ಮಾಡೋದರ ಬಗ್ಗೆ ಬಿಬಿಎಂಪಿ ಚಿಂತನೆ ಮಾಡಿತ್ತು. ಈಗಾಗಲೇ ನಗರದ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಟೆಂಡರ್ ಆಹ್ವಾನಿಸಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರುವ ಸಂಬಂಧ ಬೆಂಗಳೂರು ಘನ ತ್ಯಾಜ್ಯ ನಿರ್ವಹಾ ನಿಗಮದಿಂದ ಟೆಂಡರ್ ಕರೆಯಲಾಗಿದೆ.
ಮನೆಮನೆಯಿಂದ ಕಸ ಸಂಗ್ರಹಿಸಿ ದ್ವಿತೀಯ ಹಂತದ ವರ್ಗಾವಣೆ ಕೇಂದ್ರಗಳಿಗೆ ಸಾಗಾಣೆ ಮಾಡಲಾಗುತ್ತದೆ. ಈ ಕೇಂದ್ರಗಳಿಂದ ಸಂಸ್ಕರಣ ಘಟಕಗಳಿಗೆ ದ್ವಿತೀಯ ಹಂತದ ಸಾಗಾಣೆ ಒಳಗೊಂಡ ಪ್ಯಾಕೇಜ್ ಇದಾಗಿದ್ದು, ಪ್ರತಿ ಮನೆಯಿಂದ ಕಸ ಸಂಗ್ರಹದ ಶುಲ್ಕ ವಸೂಲಿ ಮಾಡುವುದರಿಂದ ಬ್ಲಾಕ್ ಸ್ಪಾಟ್ಗಳ ಸಂಖ್ಯೆ ಇಳಿಮುಖ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.