• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

Krishna Mani by Krishna Mani
May 23, 2024
in Top Story
0
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..
Share on WhatsAppShare on FacebookShare on Telegram

ರಾಜ್ಯದಲ್ಲಿ ಪೂರ್ವ ಮುಂಗಾರಿನ(Pre-Monsoon) ಅಬ್ಬರ ಜೋರಾಗಿದೆ.. ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣಾರ್ಭಟ ಜೋರಾಗಿದ್ದು, ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ(Weather Department) ಮುನ್ಸೂಚನೆ ನೀಡಿದೆ.. ಮಳೆ ಆರ್ಭಟ ಹಿನ್ನೆಲೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ, ಡಿಸಿಎಂ ಬಸ್‌ನಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.. ನಾಯಂಡಹಳ್ಳಿ(Nayandahalli), ಗಾಳಿ ಆಂಜನೇಯ ದೇಗುಲದ ಬಳಿ ಪರಿಶೀಲನೆ ನಡೆಸಿ, ಕಾಲುವೆ ನಿರ್ಮಾಣಕ್ಕೆ ಅಂದಾಜು ವೆಚ್ಚದ ಮಾಹಿತಿ ಪಡೆದು ಸದ್ಯ ಹೊಸ ಕಾಲುವೆ ನಿರ್ಮಾಣಕ್ಕೆ 11.5 ಕೋಟಿ ಅನುದಾನ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ADVERTISEMENT

ಸಿಟಿ ರೌಂಡ್ಸ್(City Rounds) ಬಳಿಕ ಸಿಎಂ ಮಾಧ್ಯಮಗಳ ಜೊತೆಗೆ ಮಾತನಾಡಿ ಇವತ್ತು ನಾನು, ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಸೇರಿ ಬೆಂಗಳೂರು ರೌಂಡ್ಸ್ ಮಾಡಿದ್ದೇವೆ.. ನಮ್ಮ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರ ಶಾಸಕರು(Legislature), ಸಚಿವರಿದ್ದರು.. ಜೂನ್‌ನಿಂದ ನಮ್ಮಲ್ಲಿ ಮುಂಗಾರು ಪ್ರಾರಂಭ ಆಗಲಿದೆ.. ಈ ಬಾರಿ ಪೂರ್ವ ಮುಂಗಾರು ವಾಡಿಕೆಗಿಂತ ಹೆಚ್ಚಾಗಿಯೇ ಆಗಲಿದೆ.. ಇದರಿಂದಾಗಿ ಕೆಲವು ಕಡೆಗಳಲ್ಲಿ ಪ್ರವಾಹ ಆಗಿದೆ ಅಂತ ವರದಿಯಾಗಿತ್ತು. ಹೀಗಾಗಿ ಭೇಟಿ ಮಾಡಿದ್ದೇವೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಯಲಹಂಕ(Yelahanka) ಕಡೆ ಭೇಟಿ ನೀಡಿ ಪರಿಶೀಲಿಸಿದ್ದರು. ಅಲ್ಲಿನ ಸಮಸ್ಯೆಯನ್ನು ಈಗಾಗಲೇ ಬಗೆಹರಿಸಿದ್ದೇವೆ.. ಆ ಬಳಿಕ ಮೊದಲು ಗಾಳಿ ಆಂಜನೇಯ ದೇವಸ್ಥಾನದ ಬಳಿ ರಾಜಕಾಲುವೆ ವೀಕ್ಷಣೆ ಮಾಡಿದ್ದೇವೆ.. ಅಲ್ಲಿ ಮಳೆ ಜಾಸ್ತಿ ಬಂದಾಗ ನೀರು ಹರಿಯೋದಕ್ಕೆ ಎತ್ತರ ಸಾಕಾಗಲ್ಲ.. ಈ ರಾಜಕಾಲುವೆಯಲ್ಲಿ(Royal Canal) ಹೂಳು ಎತ್ತೋ ಕೆಲಸ ಪ್ರಗತಿಯಲ್ಲಿದೆ.. ಹೀಗಾಗಿ ಇಲ್ಲಿಂದಲೇ ಇನ್ನೊಂದು ಕಾಲುವೆ ನಿರ್ಮಾಣ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.

ಸಿಟಿ ರೌಂಡ್ಸ್ ವೇಳೆ ಬೆಂಗಳೂರಿನ ರಸ್ತೆಗಳ ಅಸಲಿ ದರ್ಶನ ಸಿಎಂ ಸಿದ್ದರಾಮಯ್ಯನವರಿಗೆ ಆಗಿರುವಂತಿದೆ.. ಹೀಗಾಗಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಬಿಬಿಎಂಪಿ(BBMP) ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಮೇ 31ರವರೆಗೆ ಗಡುವು ನೀಡಿದ್ದಾರೆ. ಸದ್ಯ ಬೆಂಗಳೂರಿನ ವಾರ್ಡ್​ ರಸ್ತೆಗಳಲ್ಲಿ 5,500 ಗುಂಡಿಗಳಿವೆ.. ತ್ವರಿತವಾಗಿ ಗುಂಡಿಗಳನ್ನು ಕ್ಲಿಯರ್ ಮಾಡಬೇಕು ಎಂದು ಹೇಳಿದ್ದಾರೆ. ಇನ್ನು ರಾಜಕಾಲುವೆ ಸಮಸ್ಯೆಯಿಂದ ನೆರೆ ಉಂಟಾದ್ರೆ ಬಿಬಿಎಂಪಿ ಇಂಜಿನಿಯರ್‌ಗಳನ್ನೇ (Engineer)ಹೊಣೆ ಮಾಡಲಾಗುವುದು ಅಂತಾ ಎಚ್ಚರಿಕೆ(Warning) ಕೊಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

Next Post

ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada