• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಹಣಬಲವೋ..? ಜನಬಲವೋ..?

ಪ್ರತಿಧ್ವನಿ by ಪ್ರತಿಧ್ವನಿ
March 30, 2024
in ರಾಜಕೀಯ
0
ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಹಣಬಲವೋ..? ಜನಬಲವೋ..?
Share on WhatsAppShare on FacebookShare on Telegram

ADVERTISEMENT

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲು ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಭೇಟಿ ಆಗಿದ್ದಾರೆ. ಆರ್ ಅಶೋಕ್ ಮನೆಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಶಾಸಕ ಮುನಿರತ್ನ, ಯೋಗೇಶ್ವರ್‌ ಕೂಡ ಸಾಥ್‌ ನೀಡಿದ್ರು. ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ್ರ ಜೊತೆ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಗೆ ಪರವಾಗಿ ಚರ್ಚೆ ನಡೆಸಲಾಯಿತು. ಆರ್ ಆರ್ ನಗರದ ಶಾಸಕ ಮುನಿರತ್ನ, ಯೋಗೆಶ್ವರ್, ಕುಪೇಂದ್ರ ರೆಡ್ಡಿ, ಮಾಗಡಿ ಮಂಜುನಾಥ್ ಸೇರಿ ಚರ್ಚೆ ಮಾಡಿದ್ವಿ. ಏಪ್ರಿಲ್‌ 4 ರಂದು ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದಿದ್ದಾರೆ.

ಏಪ್ರಿಲ್‌ 4ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಸಹ ಭಾಗಿಯಾಗಲಿದ್ದಾರೆ. ಬೆಳಗ್ಗೆ 11.25 ಕ್ಕೆ ನಾಮಪತ್ರ ಸಲ್ಲಿಸಲಾಗುತ್ತದೆ. ಬಿ.ವೈ ವಿಜಯೇಂದ್ರ, ಆರ್. ಅಶೋಕ್ ಕೂಡ ಭಾಗಿಯಾಗಲಿದ್ದು, ಬೃಹತ್‌ ಬಹಿರಂಗ ಸಮಾವೇಶ ಮಾಡಲಾಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಮೈತ್ರಿಯಾಗಿ ಚುನಾವಣೆ ಎದುರಿಸಲು ನಾವು ಸಜ್ಜಾಗಿದ್ದೇವೆ ಎಂದಿದ್ದಾರೆ

ಡಾ.ಮಂಜುನಾಥ್ ವೈದ್ಯಕೀಯ ಸೇವೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಣದ ಮೂಲಕ‌ ಹೋರಾಟ ಮಾಡಲು ಸಾಧ್ಯವಿಲ್ಲ. ಇನ್ನೂ 28 ದಿನ ಬಾಕಿ ಇದೆ. ಪ್ರತಿ ಕ್ಷೇತ್ರವಾರು ಚರ್ಚೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹಣದ ಹೊಳೆ ಹರಿಸಲಾಗ್ತಿದೆ. ಅವ್ರ ಹಣ ಹಾಗೂ ಅಧಿಕಾರ ದುರುಪಯೋಗದ ಬಗ್ಗೆ ಚರ್ಚೆ ಮಾಡಿದ್ದೇವೆ. ಸುಮಾರು 18 ಲಕ್ಷ ಮತದಾರ ಇರೋ ಕ್ಷೇತ್ರವಾಗಿದೆ, ನಮ್ಮ ಅಭ್ಯರ್ಥಿ ಮಂಜುನಾಥ್ ಅವರಿಗೆ ಜನತೆಯ ಆಶಿರ್ವಾದ ಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಮಾತನಾಡಿ, ಕುಮಾರಸ್ವಾಮಿ ಅವರ ಜೊತೆಗೆ ಡಾ.ಮಂಜುನಾಥ್ ಸ್ಪರ್ಧೆ ಹಾಗೂ ಚುನಾವಣಾ ತಯಾರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಪ್ರತಿಷ್ಠಿತ ಕ್ಷೇತ್ರ. ಕುಮಾರಸ್ವಾಮಿ ನಿನ್ನೆ ಹೇಳಿದ್ರು. 2006 ರಲ್ಲಿ ನನ್ನ ರಾಜಕೀಯ ಜೀವನದಲ್ಲಿ ಹಾಲು ಜೇನನಂತಿತ್ತು. ಅದೇ ರೀತಿಯಾದ ಮೈತ್ರಿ ನಮ್ಮಲ್ಲಿ ಮತ್ತೆ ಬರ್ಬೇಕು. ಇವತ್ತು ಜೀವ ಕೋಡೊರ್ ಬೇಕಾ..? ಜೀವ ತೆಗೆಯೋರ್ ಬೇಕಾ..? ಎಂದು ಪ್ರಶ್ನಿಸಿದ್ದಾರೆ. ರಾಜಕಾರಣ ಒಳ್ಳೆಯ ರೀತಿಯಲ್ಲಿ ನಡಿಬೇಕಾದ್ರೆ, ಒಳ್ಳೆಯ ವ್ಯಕ್ತಿಗಳ ಅಗತ್ಯವಿದೆ. ಸಮಾಜಸೇವೆ ಮಾಡಿದವರು ಡಾ .ಮಂಜುನಾಥ್. ಮನೆ ಮನೆಗೂ ಡಾ. ಮಂಜುನಾಥ್ ಕರಪತ್ರ ತಲುಪಿದೆ. ಯಾವುದೇ ಜಾತಿ ಧರ್ಮ ಬೇಧ ಭಾವ ಇಲ್ಲದೆ ಕೆಲಸ ಮಾಡಿದ್ದಾರೆ. ದುರಾಡಳಿತ ಹಾಗೂ ಅಧಿಕಾರ ದಾಹದ ಸರ್ಕಾರ ಕೊನೆಯಾಗ್ಬೇಕು ಅಂತಾ ಜನ ತೀರ್ಮಾನ‌ ಮಾಡಿದ್ದಾರೆ. ಹಣ ಬಲವೋ ಜನ ಬಲವೋ ಮುಖ್ಯನಾ..? ಅನ್ನೋದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಪ್ರೂವ್ ಮಾಡ್ತಾರೆ ಎಂದಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‘ಕೈ’ ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್’

Next Post

ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಮುಖಂಡನ ದರ್ಪ..!

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಮುಖಂಡನ ದರ್ಪ..!

ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಮುಖಂಡನ ದರ್ಪ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada