ಬೆಂಗಳೂರು (Bengaluru): ಇಂದಿನಿಂದ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (Bangalore International Film Festival)ಆರಂಭವಾಗಲಿದೆ.
ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಚ್ 7 ರವರೆಗೆ ಚಿತ್ರೋತ್ಸವ ನಡೆಯಲಿದ್ದು, ಮಾರ್ಚ್ 1 ರಿಂದ ಮಾರ್ಚ್ 7ರ ವರೆಗೆ ಸಿನಿಮಾಗಳ ಪ್ರದರ್ಶನ ನಡೆಯಲಿದೆ. 50 ದೇಶಗಳ ಸುಮಾರು 180 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.
ಡಾಲಿ ಧನಂಜಯ್ ರಾಯಭಾರಿ:
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ (Daali Dhananjay) ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಲಾಗಿದೆ.
#karnataka #bengaluru #BIFFES #daalidhananjay #brandambassador #siddaramaiah