• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Any Mind by Any Mind
March 22, 2023
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ;  ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು: ಮಾ.22: ಐಟಿ, ಬಿಟಿ ಮೂಲಕ ಜಗದ್ವಿಖ್ಯಾತಿ ಆಗಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರಕಾರವು ಕೊಳ್ಳೆ ಹೊಡೆಯುವ ಎಟಿಎಂ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ADVERTISEMENT

ಬೆಂಗಳೂರಿನ ಹೆಬ್ಬಾಳದಲ್ಲಿ ರಾತ್ರಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಸ ವಿಲೇವಾರಿಯಲ್ಲಿ ಅಕ್ರಮ, ರಸ್ತೆ ಗುಂಡಿ ಮುಚ್ಚುವುದರಲ್ಲಿ ಅಕ್ರಮ ಸೇರಿದಂತೆ ಎಲ್ಲ ಯೋಜನೆಗಳಲ್ಲಿ ಅಕ್ರಮ ಎಸಗುತ್ತಿದೆ. ಯೋಜನೆಗಳ ಹೆಸರಿನಲ್ಲಿ ಈ ಸರಕಾರ ಕೊಳ್ಳೆ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು ನಗರ ನೋಡಿದರೆ ಈಗ ಎರಡು ರಾಷ್ಟ್ರೀಯ ಪಕ್ಷಗಳಿಗೆ ದುಡ್ಡು ಮಾಡುವ ಎಟಿಎಂ ಆಗಿದೆ. ಇವರಿಗೆಲ್ಲ ಇಲ್ಲಿ ಒಳ್ಳೆಯ ಆದಾಯ ಬರ್ತಾ ಇದೆ. ಜನರನ್ನು ಲೂಟಿ ಮಾಡುತ್ತಿದ್ದಾರೆ. ವಿಧಾನಸೌಧವು ಇವರ ಕೈಯ್ಯಲ್ಲಿ ಇದೆ, ಬಿಬಿಎಂಪಿ ಕೂಡ ಇವರ ಕೈಯ್ಯಲ್ಲೆಯೇ ಇದೆ. ಹೀಗಾಗಿ ಲೂಟಿ ಮಾಡಲು ಪೊಗದಸ್ತಾದ ಎಟಿಎಂ ಇವರಿಗೆ ಸಿಕ್ಕಿದೆ ಎಂದು ಹೆಚ್‌ ಡಿಕೆ ಟೀಕಾ ಪ್ರಹಾರ ನಡೆಸಿದರು.

ಪಂಚರತ್ನ ರಥಯಾತ್ರೆ ಮಾಡುತ್ತಾ ಹೆಬ್ಬಾಳ ಕ್ಷೇತ್ರದಲ್ಲಿ ನೋಡಿಕೊಂಡು ಬಂದೆ. ರಸ್ತೆಯಲ್ಲೇ ರಾಶಿ ರಾಶಿ ಕಸ ಬಿದ್ದಿದೆ. ಬಿಬಿಎಂಪಿ ಏನು ಮಾಡುತ್ತಿದೆ ಎನ್ನುವುದು ಇದರಿಂದ ಅರ್ಥ ಆಗುತ್ತದೆ ಎಂದು ಕಿಡಿಕಾರಿದರು.

ಪ್ರತಿಮೆ ರಾಜಕಾರಣ:

ಬಿಜೆಪಿ ಸರಕಾರ ಸೂಕ್ಷ್ಮ ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಕೆಲವು ವಿಚಾರಗಳು ತಿರುಗುಬಾಣ ಅದ ಮೇಲೆ ಪುತ್ಥಳಿ ಅನಾವರಣದಲ್ಲಿ ರಾಜಕಾರಣ ಮಾಡುತ್ತಿದೆ. ಮಾಡಲಿ ಸಂತೋಷ, ಈಗ ಉರಿಗೌಡ ಮತ್ತು ನಂಜೇಗೌಡ ಅಂತ ಹೇಳ್ತಾ ಇದ್ದಾರೆ. ಹೀಗೆಯೇ ಮಾಡಿದ್ದಾರೆ ಜನ ಏನು ಮಾಡುತ್ತಾರೆ ಎನ್ನುವುದು ಗೊತ್ತಿದೆ. ಈ ಬಾರಿ ಬಿಜೆಪಿ ಸೋಲುವುದು ಖಚಿತ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಯುಗಾದಿ ಬಂದಿದೆ. ಕೆಳೆದ ಯುಗಾದಿಯಲ್ಲಿ ಬಿಜೆಪಿ ನಾಯಕರಿಗೆ ಅಪ್ಯಾಯಮಾನ ಆಗಿದ್ದ ಹಲಾಲ್ ಕಟ್, ಜಟ್ಕಾ ಕಟ್ ಬಗ್ಗೆ ಮತ್ತೆ ಪ್ರೀತಿ ಹುಟ್ಟಿದೆ. ಮತ್ತೆ ವಿವಾದವನ್ನು ಶುರು ಮಾಡಿಕೊಂಡಿದ್ದಾರೆ. ಆಹಾರ, ವ್ಯಾಪಾರದಲ್ಲಿ ಕೂಡ ಅವರು ಧರ್ಮ ಹುಡುಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಕಳೆದ ಯುಗಾದಿ ಮುಗಿದ ಮೇಲೆ ಇವರು ಯಾಕೆ ಸುಮ್ಮನಿದ್ದರು. ಈಗ ಯಾಕೆ ಮಾಡ್ತಾ ಇದಾರೆ. ಇವರಿಗೆ ಅಭಿವೃದ್ಧಿ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿ ಹೋಗಲು ವಿಷಯಗಳಿಲ್ಲ. ಜನ ಈ ಸಲ ಇವರನ್ನು ನಂಬಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹೆಬ್ಬಾಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೈಯ್ಯದ್ ಮೋಹಿದ್ ಅಲ್ತಾಫ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಮುಂತಾದವರು ಇದ್ದರು.

Tags: BengalorebengalorebjpatmBJPbjpkarnatakabsbommaicmbommaictravidrshwathnarayandrsudhakarHDKhdrevannahebbalaJDSjdskarnatakapancharatnayatrevsomannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದಕ್ಕೆ??

Next Post

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

Related Posts

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?
Top Story

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಅಮೆರಿಕದಲ್ಲಿ ಹಿಂದೂತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್...

Read moreDetails
Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

August 30, 2026
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
Next Post
ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada