ಬೆಂಗಳೂರಿನ ನಗರ್ತ್ ಪೇಟೆಯಲ್ಲಿ ಹನುಮಾ ಚಾಲೀಸಾ ಕೇಸ್.. ಅಂಗಡಿ ಮಾಲೀಕ ಖಾಕಿ ವಶಕ್ಕೆ.. ಪ್ರತಿಭಟನೆ ಮಾಡ್ತಿದ್ದ ಶೋಭಾ ಕರಂದ್ಲಾಜೆ ಸೇರಿ ಹಲವರು ಅಂದರ್..
ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಗಾರ್ಡನ್ ಸಿಟಿ ಬೆಂಗಳೂರಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ನಗರ್ತ ಪೇಟೆಯ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆಸೇರಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕ ಮುಕೇಶ್ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ

ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಅಂಗಡಿ ಮಾಲೀಕ ಮುಕೇಶ್ ಪ್ರತಿಭಟನಾ ರ್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆ ಮುಕೇಶ್, ನಾವು ಬೆಂಗಳೂರಿನಲ್ಲಿ ಇಲ್ಲ. ಹಿಂದೆ ಕಾಶ್ಮೀರದಲ್ಲಿ ಆದಂತೆ ಇಲ್ಲಿ ಆಗುತ್ತಿದೆ. ನಮ್ಮ ಮೇಲೆ ಇಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಕಿಡಿಕಾರಿದರು. ಇನ್ನು, 500ಕ್ಕೂ ಹೆಚ್ಚು ಪ್ರತಿಭಟನಾಕಾರರು ಧರಣಿಯಲ್ಲಿ ಭಾಗವಹಿಸಿದ್ದರು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ಬೆಂಗಳೂರಿನ ನಗರ್ತ ಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧ ಭಾನುವಾರ ರಾತ್ರಿ 10.30ಕ್ಕೆ ಕಬ್ಬನ್‌ಪೇಟೆ ನಿವಾಸಿ ಜಿ ಮುಖೇಶ್ ಅವರು, ಸುಲೇಮಾನ್, ಶಹನವಾಜ್, ರೋಹಿತ್, ದ್ಯಾನೀಶ್, ತರುಣ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಒಟ್ಟಾರೆ ಇಡೀ ಘಟನೆ ವಿಚಾರ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ
