ರಾಜ್ಯ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಬೆಂಗಳೂರಿನಲ್ಲಿರುವ 500ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಸಿಕ್ಕ ಲಾಂಗ್, ಮುಚ್ಚುಗಳನ್ನ ವಶಕ್ಕೆ ಪಡೆದಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೂಚನೆಯಂತೆ, ಎಲ್ಲಾ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಕೇಂದ್ರ ವಿಭಾಗ, ದಕ್ಷಿಣ ವಿಭಾಗ, ಪಶ್ಚಿಮ ವಿಭಾಗ ಮತ್ತು ಉತ್ತರ ವಿಭಾಗದಲ್ಲಿ ಸುಮಾರು 500ಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನ ಮನೆಯಲ್ಲಿಇಟ್ಕೊಂಡಿದ್ದ ರೌಡಿಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ರೌಡಿಗಳಿಗೆ ಚುನಾವಣಾ ಸಮಯದಲ್ಲಿ ಯಾವ ಪಕ್ಷದ ಪರ ಹೋಗಿ ಗಲಾಟೆ, ರೌಡಿಸಂ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.