ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಲವೆಡೆ ಮಳೆರಾಯ ಅಬ್ಬರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕೆಂಪೇಗೌಡ ಸರ್ಕಲ್ ಬಳಿ 4 ಅಡಿಗೂ ಹೆಚ್ಚು ನೀರು ನಿಂತಿದ್ದಿ, ವಾಹನಗಳು ಅರ್ಧ ನೀರಿನಲ್ಲಿ ಮುಳುಗುವಂತಾಗಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ರಸ್ತೆಗಳು ಕಾಣದೇ ಕೆಲ ಕಾರುಗಳು ನಿಂತಲ್ಲೇ ನಿಂತಿವೆ. ಬಿರುಗಾಳಿ ಸಹಿತ ಮಳೆಗೆ ಬ್ಯಾರಿಕೇಡ್‌ಗಳು ನೆಲಕ್ಕುರುಳಿದ್ದು, ದೇವನಹಳ್ಳಿಯಲ್ಲೂ ಸತತ ಒಂದು ಗಂಟೆ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿ ನಲುಗಿ ಹೋಗಿದ್ದಾರೆ.
