ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಹವಾನಿಯಂತ್ರಿತ ನೆಲಮಾಳಿಗೆ ಮಾರುಕಟ್ಟೆ ಲೋಕಾರ್ಪಣೆ ಆಗಿದೆ. ಶ್ರೀಕೃಷ್ಣ ದೇವರಾಯ ಪಾಲಿಕೆ ಬಜಾರ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿ ನೆಲಮಾಳಿಗೆ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ.
ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಅಂಡರ್‌ಗ್ರೌಂಡ್ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಮಾರ್ಕೆಟ್ ಲೋಕಾರ್ಪಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಪ್ರದೇಶ ನನಗೆ ಬಹಳ ಚಿರಪರಿಚಿತ, ನಾನು ವ್ಯಾಪರಸ್ಥರ ಕಷ್ಟ ನೋಡಿದ್ದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಅದರಲ್ಲೂ ವಿಜಯನಗರದಲ್ಲಿ ಪಾಲಿಕೆಯಿಂದ ಹವಾನಿಯಂತ್ರಿತ ಮಾರುಕಟ್ಟೆ ಆಗಿದೆ. ಇದಕ್ಕಿಂತ ಸಂತೋಷದ ವಿಚಾರ ಬೇರೇನೂ ಇಲ್ಲ. ದಕ್ಷಿಣ ಭಾರತದಲ್ಲಿ ಇಂತಹ ಪಾಲಿಕೆ ಬಜಾರ್ ಎಲ್ಲೂ ಕೂಡ ಇಲ್ಲ ಅಂತಾ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.