• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಟೆಕ್ ಶೃಂಗಸಭೆ 2024 | 27ನೇ ಆವೃತ್ತಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು ಟೆಕ್ ಸಮ್ಮಿಟ್ – 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ.

ADVERTISEMENT

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾ ಆಯೋಜಿಸಿದ್ದ ‘ಬೆಂಗಳೂರು ಟೆಕ್‌ ಶೃಂಗಸಭೆ 2024ರ 27ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಟೆಕ್ ಅನ್ ಬೌಂಡ್ ಥೀಮ್ ನಡಿ ಆಯೋಜಿಸಿದ್ದ ಬಿಟಿಎಸ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಶೃಂಗಸಭೆಯ ಮಹತ್ವ ಕುರಿತು ಮಾತನಾಡಿದರು.

ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ.ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

20ನೇ ಶತಮಾನದ ಆರಂಭದಲ್ಲಿ, ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು.2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು.ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು.

ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ.

ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ ಉತ್ತೇಜಿಸಿದೆ.ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ ನಮ್ಮ ಬದ್ಧತೆ ಆಚಲವಾಗಿದೆ.

ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಹೋಲಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸಿದೆ.ರಾಜ್ಯದಲ್ಲಿ ಜಿಸಿಸಿಗಳನ್ನು ಸ್ಥಾಪಿಸಲು ಈ ಪಾರ್ಕ್ ಗಳು ಮೀಸಲಾಗಿರುತ್ತದೆ.

ಬೆಂಗಳೂರು ಜಾಗತಿಕ ನಾವೀನ್ಯತಾ ಜಿಲ್ಲೆಯು ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಯ ನಗರದ ಭಾಗವಾಗಿರಲಿದೆ(ಕ್ವಿನ್ ಸಿಟಿ). ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 45 ನಿಮಿಷಗಳ ಅಂತರದಲ್ಲಿದ್ದು, ನಾವೀನ್ಯತೆ ಮತ್ತು ಸಂಶೋಧನೆಗೆ ಜಾಗತಿಕ ಕೇಂದ್ರವಾಗಿ ಪರಿಣಮಿಸಲಿದೆ.

ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ ಅತ್ಯಧಿಕ ಎ.ಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತಿ ಪ್ರಿಯವಾದ ಗಮ್ಯವಾಗಿದೆ. ಎನ್ ಐ ಪಿ ಯು ಎನ್ ಎ ಕರ್ನಾಟಕದಡಿಯಲ್ಲಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು ನಾವು ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ. ಈಗ ತಾನೇ ಮೈಕ್ರೋ ಸಾಫ್ಟ್, ಇಂಟೆಲ್, ಆಕ್ಸೆಂಚರ್, ಐ.ಬಿ.ಎಂ ಮತ್ತು ಬಿ ಎಫ್ ಎಸ್ ಕಾಂಸಾರ್ಟಿಯಂ ಜೊತೆಗೆ ಸಹಿ ಹಾಕಲಾದ ಐದು ಒಪ್ಪಂದಗಳು ಕರ್ನಾಟಕದ ಒಂದು ಲಕ್ಷ ವ್ಯಕ್ತಿಗಳನ್ನು ಕೌಶಲಯುಕ್ತಗೊಳಿಸಲಿದೆ.

ಮಂಗಳೂರಿನ ಫಿನ್ ಟೆಕ್ ಲೀಡರ್ ಶಿಪ್ ನಿಂದ ಹುಬ್ಬಳ್ಳಿ ಧಾರವಾಡದ ಇವಿ ಪ್ರಗತಿ ಮತ್ತು ಡ್ರೋನ್ ಗಳು ಹಾಗೂ ಮೈಸೂರು ಪಿಸಿಬಿ ಕ್ಲಸ್ಟರ್ ಆಗುವವರೆಗೆ ಕ್ಲಸ್ಟರ್ ಆಧಾರಿತ ಅನುಸಂಧಾನದ ಮೂಲಕ ಸಮತೋಲಿತ ಪ್ರಾದೇಶಿಕ ಬೆಳವಣಿಗೆಯನ್ನು ಸಾಧಿಸಲಾಗುತ್ತಿದೆ.

ಬೆಂಗಳೂರಿನ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುತ್ತಲೇ, ಪ್ರಾದೇಶಿಕ ಬಲವನ್ನು ಸಜ್ಜುಗೊಳಿಸಲು ಹಾಗೂ ಹೂಡಿಕೆಗಳನ್ನು ಆಕರ್ಷಿಸಲು ಸೂಕ್ತ ನೀತಿ ಮತ್ತು ಮೂಲ ಸೌಕರ್ಯಗಳನ್ನು ಸೃಜಿಸಲಾಗುತ್ತಿದೆ.

ಟೆಕ್ ಆಧಾರಿತ ವಲಯಗಳನ್ನು ಉತ್ತೇಜಿಸಲು ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯದ ಮೇಲೆ ನಮ್ಮ ಸರ್ಕಾರವು ಗಮನಾರ್ಹ ಹೂಡಿಕೆಗಳನ್ನು ಮಾಡಿದೆ.ಗ್ರಾಮೀಣ ಸಂಪರ್ಕಕ್ಕಾಗಿ ‘ನಮ್ಮ ಗ್ರಾಮ ನಮ್ಮ ಯೋಜನೆ’ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳು ಸಂಪರ್ಕ ಮತ್ತು ಆರ್ಥಿಕ ಅವಕಾಶಗಳನ್ನು ಕರ್ನಾಟಕದಾದ್ಯಂತ ವೃದ್ಧಿಸಿದೆ.

ಬಿಯಾಂಡ್ ಬೆಂಗಳೂರು ಕಾರ್ಯಕ್ರಮಗಳ ಮೂಲಕ ಬೆಳವಣಿಗೆಯ ಸೌಲಭ್ಯಗಳನ್ನು ಟೆಕ್ ವಲಯದಿಂದಾಚೆಗೂ ಕೊಂಡೊಯ್ಯುವುದರಲ್ಲಿ ನಮಗೆ ನಂಬಿಕೆಯಿದೆ. ಇದರಿಂದ ಗ್ರಾಮೀಣ ಪ್ರದೇಶಗಳಿಗೆ ತಂತ್ರಜ್ಞಾನ, ವಿದ್ಯಾರ್ಥಿಗಳಿಗೆ ಇ – ಶಿಕ್ಷಣದ ಸುಧಾರಣೆ ಮತ್ತು ಎಲ್ಲಾ ನಾಗರಿಕ ಸೇವೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ.

2022 ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್ ಅಪ್ ಪರಿಸರ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಒಟ್ಟು 3,036 ಸ್ಟಾರ್ಟ್‌ಅಪ್‌ಗಳನ್ನು ಹೊಂದಿರುವ ಕರ್ನಾಟಕ ಭಾರತದ ಒಟ್ಟು ಸ್ಟಾರ್ಟ್‌ಅಪ್‌ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ಉದ್ಯಮಿಗಳಿಗೆ ನಮ್ಮ ಬೆಂಬಲ ಮತ್ತು ವೈವಿಧ್ಯಮಯ ಅವಕಾಶಗಳನ್ನು ಬಿಂಬಿಸುತ್ತದೆ.

ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ (IVCA) ನೊಂದಿನ ನಮ್ಮ ಸಹಯೋಗವು 100 ಧನಸಹಾಯ ಒದಗಿಸುವ ಸಂಸ್ಥೆಗಳೊಂದಿಗೆ 200 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು ಜೋಡಿಸಿದ್ದು , ಬಂಡವಾಳ, ಮಾರ್ಗದರ್ಶನ ಮತ್ತು ಬೆಳವಣಿಗೆಯ ಅವಕಾಶಗಳನ್ನು ಒದಗಿಸುತ್ತಿದೆ.ನೈಜ ಯಶಸ್ಸು ಒಳಗೊಳ್ಳುವ ಬೆಳವಣಿಗೆಯಲ್ಲಿದೆ.ಬೆಂಗಳೂರು ಮತ್ತು ಕರ್ನಾಟಕ ಎರಡರಲ್ಲೂ ಎಲ್ಲಾ ನಾಗರಿಕರು ಈ ಪರಿವರ್ತನೆಯಿಂದ ಈ ಪ್ರಯೋಜನ ಪಡೆಯುತ್ತಾರೆ ಎಂದು ಖಾತ್ರಿಪಡಿಸಿಕೊಳ್ಳಲಾಗಿದೆ.

ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಅತ್ಯಂತ ಸಂತೋಷವಾಗಿದೆ. ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸಧೃಢಗೊಳಿಸುತ್ತದೆಯಲ್ಲದೆ. ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲಿದೆ.

ದೂರದೃಷ್ಟಿವುಳ್ಳ ನಮ್ಮ ನಾಯಕರು ಮತ್ತು ಪ್ರವರ್ತಕರು ಹಾಕಿಕೊಟ್ಟ ಅಡಿಪಾಯದ ಮೇಲೆ ನಾವೀನ್ಯತೆ ಮತ್ತು ಉದ್ಯಮಶೀಲತೆಯ ನೆಲೆ ಎಂಬ ಕರ್ನಾಟಕದ ದೀರ್ಘಕಾಲದ ಖ್ಯಾತಿಯನ್ನು ನಿರ್ಮಿಸಲಾಗಿದೆ.

ಈ ಪರಂಪರೆಯನ್ನು ವಿಸ್ತರಿಸಲು ನಾವು ಬದ್ಧರಾಗಿದ್ದು, ತಂತ್ರಜ್ಞಾನ ಮತ್ತು ಪ್ರಗತಿಯಲ್ಲಿ ಕರ್ನಾಟಕವು ಜಾಗತಿಕ ನಾಯಕನಾಗಿ ಉಳಿಯಲಿರುವುದನ್ನು ಖಾತ್ರಿಪಡಿಸುತ್ತೇವೆ.ನಾವೀನ್ಯತೆ, ಸಹಯೋಗ ಮತ್ತು ಬೆಳವಣಿಗೆಯ ಈ ಪ್ರಯಾಣದಲ್ಲಿ ನಮ್ಮೊಂದಿಗೆ ಕೈಜೋಡಿಸಿದ್ದಕ್ಕಾಗಿ ಧನ್ಯವಾದಗಳು. ಒಟ್ಟಾಗಿ, ನಾವು ಕರ್ನಾಟಕ ಮತ್ತು ಅದರಾಚೆಗಿನ ಪರಿವರ್ತನೆಯನ್ನು ಮುಂದುವರಿಸೋಣ.

Tags: aerospaceBangalore Tech Summit - 2024CM Siddaramaiah‌Congress PartyDCM DK ShivakumarElectronic CityinnovationMinister Priyank KhargeSM Krishnaunique platform
Previous Post

ಶೋಭಾ ಖಡಕ್ ಮಾತಿಗೆ ಮಂಜು ಗಪ್ ಚುಪ್  –  ವೈಲ್ ಕಾರ್ಡ್ ಕಂಟೆಸ್ಟೆಂಟ್ ಫುಲ್ ಸ್ಟ್ರಾಂಗ್.!

Next Post

ಮುಗಿಲ್ ಪೇಟೆ ನಿರ್ದೇಶಕನ ಮೇಲೆ ಫೈರಿಂಗ್ ! ನಟ ತಾಂಡವ ರಾಮ್ ಕೊಲೆ ಯತ್ನದ ಆರೋಪ ! 

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಮುಗಿಲ್ ಪೇಟೆ ನಿರ್ದೇಶಕನ ಮೇಲೆ ಫೈರಿಂಗ್ ! ನಟ ತಾಂಡವ ರಾಮ್ ಕೊಲೆ ಯತ್ನದ ಆರೋಪ ! 

ಮುಗಿಲ್ ಪೇಟೆ ನಿರ್ದೇಶಕನ ಮೇಲೆ ಫೈರಿಂಗ್ ! ನಟ ತಾಂಡವ ರಾಮ್ ಕೊಲೆ ಯತ್ನದ ಆರೋಪ ! 

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada