ಮಾನ್ಯ ಎಂಬ 10 ವರ್ಷದ ಬಾಲಕಿ ವಿದ್ಯುತ್ ತಂತಿ ತುಳಿದು ಮೃತಪಟ್ಟದೆ. ಗುರುವಾರ ಸಂಜೆ ಸುಮಾರು 8.30ಕ್ಕೆ ವರ್ತೂರುವಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ತಂತಿ (Electric Wire) ತುಳಿದ ಬಾಲಕಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಾನ್ಯ ಸಾವನ್ನಪ್ಪಿದ್ದಾಳೆ.
ಈ ಸಂಬಂಧ ಬಾಲಕಿ ಪೋಷಕರು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗು ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್ಮೆಂಟ್ನ ಸುಮಾರು 100ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆ ಯನ್ನ ಅಪಾರ್ಟ್ಮೆಂಟ್ ನ PPMS ವಿಭಾಗ ನೋಡಿಕೊಳ್ಳುತ್ತಿತ್ತು. PPMS ನಿರ್ಲಕ್ಷ್ಯದಿಂದಲೇ ಮಗು ಸಾವಾಗಿದೆ. ಈ ನಿರ್ಲಕ್ಷ್ಯ ಇದೇ ಮೊದಲಲ್ಲ. ಈ ಹಿಂದೆಯೂ ನಡೆದಿತ್ತು ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಮಗು ಮೃತಪಟ್ಟ ಹಿನ್ನೆಲೆ ಅತ್ತಿಬೆಲೆಯಿಂದ ವರ್ತೂರು ಬರುವ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ದಿಢೀರ್ ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್ ಉಂಟಾಯ್ತು.