• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು- ಮೈಸೂರು ನಾನ್‌ ಸ್ಟಾಪ್ ಬಸ್‌ಗಳ ಟಿಕೆಟ್ ದರ ಹೆಚ್ಚಳ

Any Mind by Any Mind
October 28, 2023
in ಕರ್ನಾಟಕ
0
ಬೆಂಗಳೂರು- ಮೈಸೂರು ನಾನ್‌ ಸ್ಟಾಪ್ ಬಸ್‌ಗಳ ಟಿಕೆಟ್ ದರ ಹೆಚ್ಚಳ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಕೆಂಪು ಬಸ್‌ಗಳ ಪ್ರಯಾಣ ದರವನ್ನು KSRTC 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ನೇರ ಕೈ ಹಾಕಿದೆ.

ಈ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ಡಿಪೋ ಮ್ಯಾನೇಜರ್ ಡಿ ಶ್ರೀನಿವಾಸ್, ಶಕ್ತಿ ಯೋಜನೆ ಜಾರಿ ನಂತರ ತಡೆರಹಿತ ಬಸ್ಸುಗಳಿಗೆ ಬೇಡಿಕೆ ಹೆಚ್ಚಾಗಿದೆ. ಬಸ್ಸುಗಳ ಬಿಡಿಭಾಗಗಳು ಹಾಗೂ ಇಂಧನ ದರವೂ ಹೆಚ್ಚಿರುವುದರಿಂದ ದರ ಏರಿಕೆ ಮಾಡಲಾಗಿದೆ ಎಂದು ಪ್ರಯಾಣ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚಿಗೆ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಇದು ಕೂಡ ಪ್ರಯಾಣ ದರ ಹೆಚ್ಚಳಕ್ಕೆ ಕಾರಣವಾಗಿದೆ. ಬೆಂಗಳೂರು ಮತ್ತು ಇತರ ವಿಭಾಗಗಳಿಂದ ನಿರ್ವಹಿಸಲ್ಪಡುವ ಬಸ್‌ಗಳನ್ನು ಹೊರತುಪಡಿಸಿ, ಮೈಸೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ಮೈಸೂರು-ಬೆಂಗಳೂರು ನಡುವೆ ಪ್ರತಿದಿನ 30 ಬಸ್ಸುಗಳು 65 ಬಾರಿ ತಡೆರಹಿತವಾಗಿ ಸಂಚರಿಸುತ್ತಿವೆ ಎಂದರು.

ಸ್ಥಿರವಾಗಿ ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚವನ್ನು ಪರಿಗಣಿಸಿದಾಗ 15 ರೂ. ಪ್ರಯಾಣ ದರ ಹೆಚ್ಚಳವು ಕನಿಷ್ಠವಾಗಿದೆ. ಆದಾಗ್ಯೂ, ಎರಡು ನಗರಗಳ ನಡುವೆ ಕಾರ್ಯನಿರ್ವಹಿಸುವ ರಾಜಹಂಸ, ಐರಾವತ, ಇವಿ ಪವರ್ ಪ್ಲಸ್ ಮತ್ತು ಇತರ ಎಸಿ ಮತ್ತು ನಾನ್ ಎಸಿ ಐಷಾರಾಮಿ ಬಸ್‌ಗಳ ದರದಲ್ಲಿ ಯಾವುದೇ ಹೆಚ್ಚಳ ಇಲ್ಲ ಎಂದು ಅವರು ಹೇಳಿದರು.

ಈ ಹಿಂದೆ 185 ಇದ್ದ ದರ ಇದೀಗ 200 ರೂ. ಆಗಿದೆ. ಆದರೆ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರದಲ್ಲಿ ನಿಲುಗಡೆಯಿರುವ ಬಸ್ ಪ್ರಯಾಣ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

Siddaramaiah | ಯಾವುದೇ ಜಾತಿ ಧರ್ಮ ತಾರತಮ್ಯ ಮಾಡದೆ ಮನುಷ್ಯನ ಮನುಷ್ಯ ತರ ನೋಡಿ |  @PratidhvaniNews 

Next Post

ಗಾಝಾ ಕದನ ವಿರಾಮಕ್ಕೆ ಕರೆ ನೀಡಲು ವಿಶ್ವಸಂಸ್ಥೆ ನಿರ್ಣಯ: ಭಾರತದ ಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಗಾಝಾ ಕದನ ವಿರಾಮಕ್ಕೆ ಕರೆ ನೀಡಲು ವಿಶ್ವಸಂಸ್ಥೆ ನಿರ್ಣಯ: ಭಾರತದ ಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ಗಾಝಾ ಕದನ ವಿರಾಮಕ್ಕೆ ಕರೆ ನೀಡಲು ವಿಶ್ವಸಂಸ್ಥೆ ನಿರ್ಣಯ: ಭಾರತದ ಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!