ಮೈಸೂರು : ಮೈಸೂರಿನಲ್ಲಿ ರಾಜಕೀಯ ಸಮರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎಂಟ್ರಿ ಕೊಟ್ಟಿದ್ದಾರೆ . ಖಾಸಗಿ ಹೋಟೆಲ್ನಲ್ಲಿ ಲಿಂಗಾಯತ ಸಮುದಾಯದ ಮುಖಂಡರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಖ್ಯವಾಗಿ ಕೃಷ್ಣರಾಜ ಕ್ಷೇತ್ರದ ಲಿಂಗಾಯತ ಮುಖಂಡರಿಗೆ ಆಹ್ವಾನ ನೀಡಲಾಗಿದ್ದು ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಜೆಪಿ ಬ್ಯಾನ್ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿರುವಂತೆ ಕಾಣುತ್ತಿದೆ. ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಅಧಿಕಾರಕ್ಕೆ ಬಾರದೇ ಇರುವವರು ಏನು ಬೇಕಿದ್ದರೂ ಕನಸು ಕಾಣಬಹುದಾಗಿದೆ. ಭಜರಂಗದಳ ಬ್ಯಾನ್ ಎನ್ನುವುದು ಕೂಡ ತಿರುಕನ ಕನಸು ಇದ್ದಂತೆ. ಕಾಂಗ್ರೆಸ್ನವರು ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಾಗಿ ಭಜರಂಗಳದಳ ಬ್ಯಾನ್ ಪ್ರಶ್ನೆಯೇ ಉದ್ಭವಿಸೋದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.