• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡಿಸೆಂಬರ್‌ನಲ್ಲಿ ಮಂಡ್ಯಕ್ಕೆ ಭೇಟಿ ನೀಡಲಿರುವ ಬರಾಕ್ ಒಬಾಮ, ದಲೈಲಾಮ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕರ್ನಾಟಕ, ದೇಶ
0
ಬರಾಕ್‌ ಒಬಾಮಾ

ಬರಾಕ್‌ ಒಬಾಮಾ ಮತ್ತು ದಲೈ ಲಾಮ

Share on WhatsAppShare on FacebookShare on Telegram

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಟಿಬೆಟಿಯನ್ ಧಾರ್ಮಿಕ ಗುರು ದಲೈ ಲಾಮಾ ಅವರು ಡಿಸೆಂಬರ್ನಲ್ಲಿ ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಿ, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಧ್ಯಮಗಳು ಗುರುವಾರ (ಆಗಸ್ಟ್‌ 31) ವರದಿ ಮಾಡಿವೆ.

ADVERTISEMENT

ಮಂಡ್ಯದ ಹಲ್ಲೆಗೆರೆ ಗ್ರಾಮದಲ್ಲಿ ಭೂತಾಯಿ ಟ್ರಸ್ಟ್ ಈ ಆಧ್ಯಾತ್ಮಿಕ ಕೇಂದ್ರವನ್ನು ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಈ ಸಂಬಂಧ ಅಮೆರಿಕದ ವೈದ್ಯ ಡಾ.ಲಕ್ಷ್ಮೀನರಸಿಂಹಮೂರ್ತಿ ನೇತೃತ್ವದ ನಿಯೋಗ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಲ್ಲೇಗೆರೆ ಗ್ರಾಮಕ್ಕೆ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸಲು ನೆರವು ನೀಡುವಂತೆ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವೇ ಅಧಿಕಾರಿಗಳ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಆಧ್ಯಾತ್ಮಿಕ ಕೇಂದ್ರದ ಕಾರ್ಯವೈಖರಿಯನ್ನು ವಿವರಿಸಿದ ನಿಯೋಗದ ಸದಸ್ಯರು, ಹಲ್ಲೇಗೆರೆ ಮಂಡ್ಯ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ಹೇಳಿದ್ದಾರೆ.

ಭೂತಾಯಿ ಟ್ರಸ್ಟ್ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರವನ್ನು ಸ್ಥಾಪಿಸುವ ಮಹದಾಶಯ ಹೊಂದಿದೆ. ಇದರ ಶಂಕುಸ್ಥಾಪನೆಗಾಗಿ ಬರಾಕ್ ಒಬಾಮಾ ದಂಪತಿ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಆಗಮಿಸುವರು. ಹೀಗಾಗಿ ಹಲ್ಲೇಗೆರೆ ಗ್ರಾಮದಲ್ಲಿ ಹೆಲಿಪ್ಯಾಡ್, ರಸ್ತೆ ನಿರ್ಮಾಣ, ವಿದ್ಯುತ್ ದೀಪಗಳ ವ್ಯವಸ್ಥೆ, ಚರಂಡಿ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸರಕಾರದಿಂದ ಒದಗಿಸಿಕೊಡಬೇಕೆಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಅಮೆರಿಕ ಹಾಲಿ ಅಧ್ಯಕ್ಷರಾದ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಅವರು ಭಾರತೀಯ ಮೂಲದವರು. ಡಾ.ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು.

ಡಾ.ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್.ಎನ್.ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ. ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೆಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್ ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯಪ್ರವೃತ್ತರಾಗಿದ್ದಾರೆ.

Tags: Barack ObamaCM SiddaramaiahDalai LamaInternational Yoga and Meditation CentreMandyaಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರದಲೈ ಲಾಮಬರಾಕ್‌ ಒಬಾಮಾಮಂಡ್ಯಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಸಿಇಟಿ | ಕ್ರೀಡಾ ಕೋಟಾ ನಿಯಮಗಳ ಪರಿಷ್ಕರಿಸಿದ ರಾಜ್ಯ ಸರ್ಕಾರ

Next Post

ಪಾವಗಡ ಸೋಲಾರ್‌ ಪಾರ್ಕ್‌ 3 ಸಾವಿರ ಮೆ.ವ್ಯಾ ವಿಸ್ತರಣೆಗೆ ಸರ್ಕಾರ ಸಮ್ಮತಿ

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ಪಾವಗಡ ಸೋಲಾರ್‌ ಪಾರ್ಕ್‌

ಪಾವಗಡ ಸೋಲಾರ್‌ ಪಾರ್ಕ್‌ 3 ಸಾವಿರ ಮೆ.ವ್ಯಾ ವಿಸ್ತರಣೆಗೆ ಸರ್ಕಾರ ಸಮ್ಮತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada