• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”

ಪ್ರತಿಧ್ವನಿ by ಪ್ರತಿಧ್ವನಿ
January 18, 2025
in ಸಿನಿಮಾ
0
ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”
Share on WhatsAppShare on FacebookShare on Telegram

ADVERTISEMENT

ಹಾಡುಗಳನ್ನು ಬಿಡುಗಡೆ ಮಾಡಿ ಹಾರೈಸಿದ ಸಚಿವ ಹೆಚ್ ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ .

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ ಆಧಾರಿತ “ಸ್ವಪ್ನ ಮಂಟಪ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅವರು ವಿಜಯ್ ರಾಘವೇಂದ್ರ ಮತ್ತು ನಟಿ ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು.‌ ಶಮಿತಾ ಮಲ್ನಾಡ್ “ಸ್ವಪ್ನ ಮಂಟಪ” ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ನಾನು ಇಷ್ಟು ದಿ‌ನ ಚಿತ್ರ ಬಿಡುಗಡೆಯಾಗಿ ಜನಪ್ರಿಯವಾದ ಚಿತ್ರಗೀತೆಗಳನ್ನು ಮಾತ್ರ ಕೇಳುತ್ತಿದ್ದೆ. ಇದೇ ಮೊದಲು ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳನ್ನು ಕೇಳಿದ್ದೇನೆ ಹಾಗೂ ನೋಡಿದ್ದೇನೆ.‌ “ಸ್ವಪ್ನ ಮಂಟಪ”ದ ಹಾಡುಗಳು ಹಾಗೂ ಕಥೆ ಚೆನ್ನಾಗಿದೆ‌. ಕಾದಂಬರಿ ಆಧಾರಿತ ಚಿತ್ರಗಳನ್ನು ಮಾಡುವವರು ಮತ್ತು ನೋಡುವವರು ಸಂಖ್ಯೆ ಕಡಿಮೆ ಇದೆ. ಇಂತಹ ಸಮಯದಲ್ಲಿ ಬರಗೂರು ರಾಮಚಂದ್ರಪ್ಪ ಅವರು ಈ ಸಿನಿಮಾ‌ ಮಾಡಿದ್ದಾರೆ. ಅವರ ಪ್ರಯತ್ನಕ್ಕೆ ಒಳ್ಳೆಯದಾಗಲಿ ಎಂದು ಸಚಿವ ಹೆಚ್ ಕೆ ಪಾಟೀಲ್ ಶುಭ ಕೋರಿದರು.
ಸಂಗೀತ ನಿರ್ದೇಶಕ ಗುರುಕಿರಣ್ ಸಹ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.
‌
ಈ ವೇಳೆ ಮಾತನಾಡಿದ ನಿರ್ದೇಶಕ ಪ್ರೊ. ಬರಗೂರು ರಾಮಚಂದ್ರಪ್ಪ, 25 ವರ್ಷಗಳ ಹಿಂದೆ ವಾರಪತ್ರಿಕೆಯಲ್ಲಿ ಪ್ರಕಟವಾದ ಕಾದಂಬರಿ “ಸ್ವಪ್ನ ಮಂಟಪ” ಇದೀಗ ಅದನ್ನು ಚಿತ್ರ ರೂಪದಲ್ಲಿ ಕಟ್ಟಿಕೊಡಲಾಗಿದೆ. ಚಾರಿತ್ರಿಕ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ ಪರಂಪರೆ ಉಳಿಸಬೇಕು ಎನ್ನುವ ಆಶಯವನ್ನು ಅಭಿವ್ಯಕ್ತಿ ಪಡಿಸುವ ಚಿತ್ರ ಇದು. ನಾಯಕ ಚರಿತ್ರೆಯ ಬಗೆಗೆ ಆಸಕ್ತಿ ಇರುವವನು, ನಾಯಕಿ ಸಮಾಜ ವಿಜ್ಞಾನದ ಕುರಿತು ಕುತೂಹಲ ಉಳ್ಳವಳು. ಚಾರಿತ್ರಿಕ ಮತ್ತು ಸಾಮಾಜಿಕ ಪ್ರಜ್ಞೆ ಎರಡೂ ಸೇರಿ ಸಮಾಜಮುಖಿ , ಇತಿಹಾಸ ಪ್ರಜ್ಞೆ ಇರಬೇಕು ಎನ್ನುವ ಜೊತೆ ಜೊತೆಗೆ ಸ್ಮಾರಕ ರಕ್ಷಣೆ ಮಾಡಬೇಕು ಎನ್ನುವ ಆದರ್ಶ ಮತ್ತು ಆಶಯ ಹೊಂದಿರುವ ಚಿತ್ರವಿದು. “ಸ್ವಪ್ನ‌ ಮಂಟಪ”ದಲ್ಲಿ ಪ್ರವೇಶ ಮಾಡಿದರೆ ಸಾಕು. ಕನಸುಗಳು ಅನಾವರಣವಾಗುತ್ತದೆ. ಇಂತಹ ವಾತಾವರಣವಿರುವ ಪ್ರದೇಶವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಮುಂದಾದಾಗ ನಾಯಕ, ನಾಯಕಿ ಜನರಲ್ಲಿ ಜಾಗೃತಿ ಮೂಡಿಸಿ ಸ್ಮಾರಕ ರಕ್ಷಣೆ ಮಾಡುವ ತಿರುಳನ್ನು ಚಿತ್ರದ ಕಥಾವಸ್ತು ಹೊಂದಿದೆ. “ಸ್ವಪ್ನ ಮಂಟಪ” ನನ್ನ ನಿರ್ದೇಶನದ 24ನೇ ಚಿತ್ರ. ಮೈಸೂರಿನ ಎ.ಎಂ.ಬಾಬು ಅವರು ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ಇಂದು ಹಾಡುಗಳನ್ನು ಸನ್ಮಾನ್ಯ ಸಚಿವರು ಹಾಗೂ ಗುರುಕಿರಣ್ ಅವರು ಬಿಡುಗಡೆ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ಎಂದರು.

ನಾಯಕಿ ರಂಜನಿ ರಾಘವನ್ ಮಾತನಾಡಿ ಚಿತ್ರದಲ್ಲಿ ಎರಡು ಪಾತ್ರಗಳನ್ನು ಮಾಡಿದ್ದೇನೆ. ಒಂದು ರಾಣಿಯ ಪಾತ್ರ ಮತ್ತೊಂದು ಶಿಕ್ಷಕಿ ಪಾತ್ರ. ಚಿತ್ರದಲ್ಲಿ ನಟಿಸಿದ್ದು, ಅದರಲ್ಲಿಯೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ್ದು ಕಲಿಕೆಗೆ ಸಿಕ್ಕ ಅವಕಾಶ ಎಂದು ಹೇಳಿದರು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕಿ ಡಾ. ಶಮಿತಾ ಮಲ್ನಾಡ್ ಮಾಹಿತಿ ನೀಡಿದರು. ನಟ ಸುಂದರರಾಜ್ “ಸ್ವಪ್ನ ಮಂಟಪ”ದ ಅನುಭವಗಳನ್ನು ಹಂಚಿಕೊಂಡರು.
ನಿರ್ಮಾಪಕ ಎ.ಎಂ.ಬಾಬು ಅವರು ಇದು ನಮ್ಮ ಮೊದಲ ನಿರ್ಮಾಣದ ಚಿತ್ರ. ಮುಂದೆ ಕೂಡ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಮಾಡುವ ಹಂಬಲವಿದೆ ಎಂದರು. ನಿರ್ಮಾಪಕ ಎ.ಎಂ.ಬಾಬು ಅವರ ಪತ್ನಿ ಕವಿತಾ, ಸಂಕಲನಕಾರ ಸುರೇಶ್ ಅರಸ್ ಮುಂತಾದ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: ಬರಗೂರು ರಾಮಚಂದ್ರಪ್ಪಸಂಗೀತ ನಿರ್ದೇಶಕ ಗುರುಕಿರಣ್ .ಹೆಚ್ ಕೆ ಪಾಟೀಲ್
Previous Post

ಸಿದ್ದರಾಮಯ್ಯ ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ

Next Post

ರಾಜ್ಯ ಸರ್ಕಾರ ಮುಸ್ಲಿಮರ ಕಂಟ್ರೋಲ್ ನಲ್ಲಿದೆ – ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಸೂಲಿಬೆಲೆ ಕಳವಳ!

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ರಾಜ್ಯ ಸರ್ಕಾರ ಮುಸ್ಲಿಮರ ಕಂಟ್ರೋಲ್ ನಲ್ಲಿದೆ – ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಸೂಲಿಬೆಲೆ ಕಳವಳ!

ರಾಜ್ಯ ಸರ್ಕಾರ ಮುಸ್ಲಿಮರ ಕಂಟ್ರೋಲ್ ನಲ್ಲಿದೆ - ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಸೂಲಿಬೆಲೆ ಕಳವಳ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada