• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಸವಣ್ಣ, ಅಂಬೇಡ್ಕರ್ ಅವರು ಹಿಂದೂ ಧರ್ಮ ತ್ಯಜಿಸಿದಕ್ಕೆ ಅವರನ್ನು ಪಠ್ಯದಲ್ಲಿ ನಿರ್ಲಕ್ಷಿಸಲಾಯಿತೇ? : ಸಿದ್ದರಾಮಯ್ಯ ಪ್ರಶ್ನೆ

Any Mind by Any Mind
June 5, 2022
in ಕರ್ನಾಟಕ
0
ಬಿಜೆಪಿಯವರ ಜಾಹಿರಾತು ರಾಜ್ಯಕ್ಕೆ ಅವಮಾನ : ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಹಲವು ದಿನಗಳಿಂದ ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೇರಿದೆ. ಪರಿಷ್ಕರಣೆಯಾದ ಪಠ್ಯವನ್ನು ರದ್ದು ಮಾಡಿ ಅನೇಕ ಸಮುದಾಯದ ನಾಯಕರಿಗೆ ಮತ್ತು ನಾಡ ಗೀತೆಗೆ ಅಪಮಾಣ ಮಾಡಿದ ರೋಹಿತ್‌ ಚಕ್ರತೀರ್ಥನನ್ನು ಬಂಧಿಸಿ ಎಂದು ಸಾರ್ವಜನಿಕ ವಲಯದಿಂದ ಬಲವಾದ ವಿರೋದ ವ್ಯಕ್ತವಾದರೂ ಸಹ ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಸಮರ್ಥನೆಗಿಳಿದಿದ್ದಾರೆ. ಈ ಸಮರ್ಥನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತೀರ್ವವಾಗಿ ಟೀಕಿಸಿದ್ದು, ಬಸವಣ್ಣ, ಅಂಬೇಡ್ಕರ್ ಅವರು ಹಿಂದೂ ಧರ್ಮ ತ್ಯಜಿಸಿದಕ್ಕೆ ಪಠ್ಯದಲ್ಲಿ ಅವರನ್ನು ನಿರ್ಲಕ್ಷಿಸಲಾಯಿತೇ? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಹೌದು, ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಅಗ್ರಹಿಸಿದ್ದಾರೆ.

‘ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಬಿಸಿ ನಾಗೇಶ್‌? ಎಂದು ಪ್ರಶ್ನಿಸಿದ್ದಾರೆ.

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಬಿಸಿ ನಾಗೇಶ್‌? ಎಂದು ಸಾಲು ಸಾಲು ಪ್ರಶ್ನೆಗಳಿರಿಸಿ ಉತ್ತರಕ್ಕೆ ಆಗ್ರಹಿಸಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಬಿಸಿ ನಾಗೇಶ್‌? ಎಂದು ಕೇಳಿದ್ದಾರೆ.

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ ಬಿಸಿ ನಾಗೇಶ್‌? ಎಂದು ಮರು ಪ್ರಶ್ನೆ ಎಸೆದಿದ್ದಾರೆ.

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಕಿಡಿಕಾರಿದ್ದಾರೆ.

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ @BCNagesh_bjp. 6/6#WhoAreHindus

— Siddaramaiah (@siddaramaiah) June 5, 2022
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,270 ಕರೋನಾ ಕೇಸ್ ಪತ್ತೆ : ಮಹಾಮಾರಿಗೆ 15 ಮಂದಿ ಬಲಿ!

Next Post

ಯಾವುದೇ ಕಾರಣಕ್ಕೂ ಹೆಡಗೇವಾರ್ ಪಾಠ ಕೈಬಿಡುವುದಿಲ್ಲ : ಮುಖ್ಯಮಂತ್ರಿ ಬೊಮ್ಮಾಯಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಯಾವುದೇ ಕಾರಣಕ್ಕೂ ಹೆಡಗೇವಾರ್ ಪಾಠ ಕೈಬಿಡುವುದಿಲ್ಲ : ಮುಖ್ಯಮಂತ್ರಿ ಬೊಮ್ಮಾಯಿ

ಯಾವುದೇ ಕಾರಣಕ್ಕೂ ಹೆಡಗೇವಾರ್ ಪಾಠ ಕೈಬಿಡುವುದಿಲ್ಲ : ಮುಖ್ಯಮಂತ್ರಿ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada