Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣ, ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಭೂಮಿಪೂಜೆ ನೆರವೇರಿಸಿದ ಸಿಎಂ

ಪ್ರತಿಧ್ವನಿ

ಪ್ರತಿಧ್ವನಿ

January 13, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

Nalin Kumar Kateel..ಒಬ್ಬ ವಿದೂಷಕ : Siddaramaiah

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

ಬೆಂಗಳೂರು : ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸಧದ ಮುಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು. ಈ ಇಬ್ಬರೂ ಮಹಾತ್ಮರ ಪ್ರೇರಣೆ ವಿಧಾನಸೌಧದಲ್ಲಿ ನಿಲ್ಲಲಿ ಎಂದು ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದರು.

ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ
ಬರುವ ದಿನಗಳಲ್ಲಿ ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ ಎಂದರು. ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ನಾಡು ಕಟ್ಟಿರುವ ಅಪ್ರತಿಮ ನಾಯಕರು
ಕನ್ನಡನಾಡಿನಲ್ಲಿ ಹುಟ್ಟಿ, ಕ್ರಾಂತಿಯನ್ನು ಮಾಡಿದ ಇಬ್ಬರು ಮಹಾನ್ ಪುರುಷರು. ಒಬ್ಬರು ವಿಶ್ವಬಂಧು, ಸಾಮಾಜಿಕ, ಆರ್ಥಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಮಾಡಿ ಜಗತ್ತಿಗೆ ದರ್ಶನವನ್ನು ನೀಡಿರುವವರ ಪುತ್ಥಳಿ ಹಾಗೂ ನಾಡು ಕಟ್ಟಿರುವ ಅಪ್ರತಿಮ ನಾಯಕರು, ಜನಹಿತಕ್ಕಾಗಿ ಕರಕಟ್ಟೆಗಳು, ಊರು ಕೇರಿಗಳನ್ನು, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ಮಾಡಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ವಿಧಾನಸಭಾ ಮುಂಭಾಗದಲ್ಲಿ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಎಲ್ಲಾ ನಾಯಕರ ಅನುಮತಿ ಪಡೆದು, ಸಚಿವ ಆರ್. ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಅಶೋಕ್ ಅವರು ಅತ್ಯಂತ ಅಚ್ಚುಕಟ್ಟಾಗಿ ಜವಾಬ್ದಾರಿಯನ್ನು ನಿರ್ವಹಿಸಿ, ಕೇವಲ ಒಂದೂವರೆ ಎರಡು ತಿಂಗಳೊಳಗೆ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡಿದ್ದಾರೆ. ನಾಡಿನ ಎಲ್ಲಾ ಪರಮಪೂಜ್ಯರ ಸಾನಿಧ್ಯದಲ್ಲಿ, ಅವರ ಆಶೀರ್ವಾದದೊಂದಿಗೆ ಒಂದು ಶಂಕುಸ್ಥಾಪನೆ ನೆರವೇರಿದೆ ಎಂದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ನಮ್ಮ ಕೆಲಸಗಳೇ ನಮ್ಮ ಕೊಡುಗೆಗೆ ಸಾಕ್ಷಿ ಹೇಳುತ್ತವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕರ್ನಾಟಕ

ನಮ್ಮ ಕೆಲಸಗಳೇ ನಮ್ಮ ಕೊಡುಗೆಗೆ ಸಾಕ್ಷಿ ಹೇಳುತ್ತವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
January 25, 2023
ರಮೇಶ್​ ಜಾರಕಿಹೊಳಿಗೆ ಬೇರೆಯವರ ಬಗ್ಗೆ ಮಾತಾಡೋ‌ದೆ ಚಪಲ..ಚನ್ನರಾಜ್ ಹಟ್ಟಿಹೊಳಿ
ರಾಜಕೀಯ

ರಮೇಶ್​ ಜಾರಕಿಹೊಳಿಗೆ ಬೇರೆಯವರ ಬಗ್ಗೆ ಮಾತಾಡೋ‌ದೆ ಚಪಲ..ಚನ್ನರಾಜ್ ಹಟ್ಟಿಹೊಳಿ

by ಪ್ರತಿಧ್ವನಿ
January 30, 2023
Top Story

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದು

by ಪ್ರತಿಧ್ವನಿ
January 30, 2023
V. Somanna|ನನಗೆ ಒಂದೇ ಒಂದು ಆಸೆ ಬೊಮ್ಮಾಯಿ ಅವರೇ ಮುಂದೇನು ಸಿಎಂ ಆಗಿರಬೇಕು
ರಾಜಕೀಯ

V. Somanna|ನನಗೆ ಒಂದೇ ಒಂದು ಆಸೆ ಬೊಮ್ಮಾಯಿ ಅವರೇ ಮುಂದೇನು ಸಿಎಂ ಆಗಿರಬೇಕು

by ಪ್ರತಿಧ್ವನಿ
January 30, 2023
Dr Vishnuvardhan | ಅಭಿಮಾನಿಗಳ 13 ವರ್ಷದ ಹೋರಾಟ , ಆಕ್ರೋಶ ಇವತ್ತಿನ ಈ ಸ್ಮಾರಕಕ್ಕೆ ಕಾರಣ : Mandya Ramesh
ಸಿನಿಮಾ

Dr Vishnuvardhan | ಅಭಿಮಾನಿಗಳ 13 ವರ್ಷದ ಹೋರಾಟ , ಆಕ್ರೋಶ ಇವತ್ತಿನ ಈ ಸ್ಮಾರಕಕ್ಕೆ ಕಾರಣ : Mandya Ramesh

by ಪ್ರತಿಧ್ವನಿ
January 30, 2023
Next Post
ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist