ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡೆ ಸ್ಥಳೀಯ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಸಂಸದ ಪ್ರತಾಪ್ ಸಿಂಹ ರಾಜ್ಯದಲ್ಲಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಪ್ರತಾಫ್ ಸಿಂಹ ಇಂತಹದ್ದೊಂದು ಆರೋಪ ಮಾಡಿದ ಬೆನ್ನಲ್ಲೇ ಇದೀಗ ಬೊಮ್ಮಾಯಿ ಹಾಗೂ ಶಾಮನೂರು ಶಿವಶಂಕರಪ್ಪ ಭೇಟಿ ಭಾರೀ ಅನುಮಾನಕ್ಕೆ ಕಾರಣವಾಗಿದೆ.

ಸ್ವತಃ ಬಸವರಾಜ ಬೊಮ್ಮಾಯಿಯೇ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾಗಲು ರೆಸಾರ್ಟ್ಗೆ ಕರೆಯಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಸಭೆಯಲ್ಲಿ ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.