ಹಲವು ಕಾರ್ಯಕರ್ಮಗಳನ್ನು ಹಮ್ಮಿಕೊಂಡು ಕರ್ನಾಟಕಕ್ಕೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಮಂಗಳವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಪಕ್ಷದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿಯವರು ಸರಳ ಮತ್ತು ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದರು. ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದೊಂದಿಗೆ ಮುಸಿಕೊಂಡಿದ್ದ ಹೊರಟ್ಟಿ ಅವರು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸೇರ್ಪಡೆಯಾಗುವ ಸುಳಿವು ನೀಡಿದ್ದರೂ ಆದರೀಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ಧಾರೆ.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಮೇಲೆ ನನಗೆ ಅಪಾರ ಗೌರವವಿದೆ, ಆದರೆ ಮತದಾರರ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.