ನಗರದಲ್ಲಿರುವ ಹಳೆಯ ಮರಗಳ ರೆಂಬೆ-ಕೊಂಬೆಗಳನ್ನು ಗುರುತಿಸಿ ಅನಾಹುತ ನಡೆಯವು ಮೊದಲೇ ತೆರವುಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ, ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳ ತಂಡದೊಂದಿಗೆ ಹಲವು ಪ್ರದೇಶಗಳಿಗೆ ಭೇಟಿ ನೀಡಲಾಯಿತು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳಿಗೆ ಅಲರ್ಟ್ ಆಗಿ ಇರುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-22-at-5.03.21-PM-1024x808.jpeg)
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
![](https://pratidhvani.com/wp-content/uploads/2024/05/WhatsApp-Image-2024-05-22-at-5.03.21-PM-1-1024x711.jpeg)
ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-22-at-5.03.22-PM-1024x692.jpeg)
ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ನ್ಯಾಯಾಲಯದಲ್ಲಿ ಪ್ರಕರಣವಿದೆ.
![](https://pratidhvani.com/wp-content/uploads/2024/05/WhatsApp-Image-2024-05-22-at-5.03.22-PM-1-1024x846.jpeg)
ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.