ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು ಒಂದೇ ಕಂತಿನಲ್ಲಿ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡಲಾಗಿದೆ. ಏಪ್ರಿಲ್ ತಿಂಗಳೊಳಗೆ ಪಾವತಿಸುವವರಿಗೆ ಮಾತ್ರಾ ಈ ರಿಯಾಯಿತಿ ಸೌಲಭ್ಯ ದೊರೆಯುತ್ತದೆ. ಇದೀಗ ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಎದುರಾದ ಹಿನ್ನೆಲೆ, ಕೋವಿಡ್ ನಿಯಂತ್ರಣದ ಸಲುವಾಗಿ ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಿದ್ದರಿಂದ ಪಾವತಿಸುವ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಲಾಗಿದೆ.

ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಬ್ಯಾಂಕ್ಗಳಿಗೆ ತೆರಳಿ ಚಲನ್ ಪಡೆದು ತೆರಿಗೆ ಪಾವತಿಸುವುದು ಕಷ್ಟ ಸಾಧ್ಯವಾಗಿತ್ತು. ಇದರಿಂದ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿತ್ತು. ಮತ್ತೆ ಸಾರ್ವಜನಿಕರ ಒತ್ತಾಯದ ಮೇರೆಗೆ ಜೂನ್ 30 ವರೆಗೆ ಅವಧಿಯನ್ನು ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.