• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿ ಇರದಿದ್ರೆ ಕ್ರಮ: BBMP ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ

Any Mind by Any Mind
December 25, 2023
in ಕರ್ನಾಟಕ
0
ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿ ಇರದಿದ್ರೆ ಕ್ರಮ: BBMP ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ
Share on WhatsAppShare on FacebookShare on Telegram

ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಫೆಬ್ರವರಿ 28 ರೊಳಗಾಗಿ ಶೇ. 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆಯ ಜೊತೆ ಮಲ್ಲೇಶ್ವರಂ ಐಪಿಪಿ ಸಭಾಂಗಣದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಎಲ್ಲಾ ವಲಯ ಆಯುಕ್ತರ ಜೊತೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವುದೆಂದು ಹೇಳಿದರು.

ನಗರದಲ್ಲಿ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು 1400 ಕಿ.ಮೀ ನಷ್ಟಿದ್ದು, ಸದರಿ ರಸ್ತೆಗಳಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ವಲಯವಾರು ಸರ್ವೆ ಮಾಡಿಸಲಾಗುವುದು. ಸರ್ವೇಯ ನಂತರ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಮಳಿಗೆಗಳಿಗೆ ನೋಟೀಸ್ ನೀಡಲಾಗುವುದು. ನೋಟೀಸ್ ನಿಡಿದ ಬಳಿಕ ಫೆಬ್ರವರಿ 28 ರವರೆಗೆ ಸಮಯಾವಕಾಶ ನೀಡಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಿ ಆಯಾ ವಲಯ ಆಯುಕ್ತರಿಗೆ ಅನುಪಾಲನೆ ಸಲ್ಲಿಸಬೇಕೆಂದು ಸೂಚಿಸಲಾಗುವುದೆಂದು ತಿಳಿಸಿದರು.

ನಗರದಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.

ಫೆಬ್ರವರಿ 28ರೊಳಗಾಗಿ ಕನ್ನಡ ನಾಮಫಲಕಗಳನ್ನು ಅಳವಡಿಕೊಳ್ಳದ ಅಂಗಡಿ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಅದರಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸದ ಅಂಗಡಿ ಮುಂಗಟ್ಟುಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು ತದನಂತರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಜೊತೆಗೆ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಯ ಮೇಲೂ ಶಿಸ್ತು ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.

ನಗರದಲ್ಲಿ ಬರುವ ದೊಡ್ಡ ದೊಡ್ಡ ಮಾಲ್ ಗಳ ಜೊತೆ ಕೂಡಲೆ ಸಮಾಲೋಚನೆ ನಡೆಸಿ ಮಾಲ್ ಗಳಲ್ಲಿರುವ ಎಲ್ಲಾ ಮಳಿಗೆಗಳಲ್ಲಿ 15-20 ದಿನಗಳೊಳಗಾಗಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಮುಖ್ಯ ಅಭಿಯಂತರರಾದ ಪ್ರವೀಣ್ ಲಿಂಗಯ್ಯ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ್ ಗೌಡ, ಕನ್ನಡ ಸಂಘದ ಪ್ರತಿನಿಧಿಗಳು, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BBMPBJPCommisinorCongress PartyEnglishHindiKannadaLanguageಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ರೈತರ ಬೇಡಿಕೆ ಈಡೇರಿಸದ ಕೇಂದ್ರ : ದೆಹಲಿ ಚಲೋಗೆ ರೈತರ ನಿರ್ಧಾರ

Next Post

ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಲೆಕ್ಕಕ್ಕೇ ಇಲ್ಲದ ನಾಯಕ: ಗೋವಿಂದ ಕಾರಜೋಳ ವ್ಯಂಗ್ಯ

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌

ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌

February 14, 2026
Next Post
ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಲೆಕ್ಕಕ್ಕೇ ಇಲ್ಲದ ನಾಯಕ: ಗೋವಿಂದ ಕಾರಜೋಳ ವ್ಯಂಗ್ಯ

ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಲೆಕ್ಕಕ್ಕೇ ಇಲ್ಲದ ನಾಯಕ: ಗೋವಿಂದ ಕಾರಜೋಳ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada