• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ನಡೆಸಲು ಬಿಬಿಎಂಪಿ ಸನ್ನದ್ಧ : ಪಾಲಿಕೆ ಆಯುಕ್ತ ಗೌರವ್ ಗುಪ್ತಾ

Any Mind by Any Mind
October 27, 2021
in ಕರ್ನಾಟಕ
0
ಚುನಾವಣೆ ನಡೆಸಲು ಬಿಬಿಎಂಪಿ ಸನ್ನದ್ಧ : ಪಾಲಿಕೆ ಆಯುಕ್ತ ಗೌರವ್ ಗುಪ್ತಾ
Share on WhatsAppShare on FacebookShare on Telegram

ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿದರೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ADVERTISEMENT

ಚುನಾವಣೆ ವಿಚಾರವಾಗಿ ನವೆಂಬರ್ 8 ರಂದು ತೀರ್ಪು ಪ್ರಕಟವಾಗುವ ಸಾಧ್ಯತೆಗಳಿವೆ. ನ್ಯಾಯಾಲಯ ಏನೇ ಆದೇಶ ನೀಡಿದ್ದರು ಅದನ್ನು ಚಾಚು ತಪ್ಪದೆ ಪಾಲಿಸಲಾಗುವುದು ಎಂಧು ಹೇಳಿದ್ದಾರೆ.

ಈಗಾಗಲೇ 243 ವಾರ್ಡ್ ರಚನೆ ಕಾರ್ಯ ಪ್ರಗತಿಯಲ್ಲಿದ್ದು ಈ ವಿಚಾರವಾಗಿ ಹಲವು ಸಭೆಗಳನ್ನು ನಡೆಸಲಾಗಿದೆ. ಈ ಹಿಂದೆ ಸಭೆ ನಡೆಸಿದ್ದಾಗ ಪಾಲಿಕೆ ವ್ಯಾಪ್ತಿಗೆ ಕೆಲವು ಗ್ರಾಮಗಳ ಸೇರ್ಪಡೆ ಬಗ್ಗೆ ಈಗಾಗಲೇ ಆ ಗ್ರಾಮಗಳ ದಾಖಲೆಗಳ ಬಗ್ಗೆ ಸರ್ಮಪಕ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

243 ವಾರ್ಡ್ಗಳ ರಚನೆಯ ಕರಡು ಪ್ರತಿ ಸಿದ್ದವಾಗಿದ್ದು ಇದನ್ನು ಸರ್ಕಾರಕ್ಕೆ ಸಲ್ಲಿಸಿ ಸರ್ಕಾರದಿಂದ ಅನುಮತಿ ದೊರೆತರೆ ವಾರ್ಡ್ ರಚನೆ ಕಾರ್ಯ ಅಂತಿಮವಾಗಲಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ತಯಾರಿ ಆರಂಭಿಸಿದ ಪಕ್ಷಗಳು

ಬಿಬಿಎಂಪಿ ಚುನಾವಣೆ ಮಾರ್ಚ್ ಗೆ ಘೋಷಣೆಯಾಗು ಸಾಧ್ಯತೆ ಇದೆ ಎಂಬ ಸುದ್ದಿ ಹಾರಿದಾಡುತ್ತಿದೆ. ಹೀಗಾಗಿ ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಜೊತೆಗೆ ಈ ಭಾರಿ ಆಪ್‌ ಪಕ್ಷವು ಚುನಾವಣಾ ಅಖಾಡಕ್ಕೆ ಇಳಿದಿದ್ದು ನಗರದಲ್ಲಿ ಚುನಾವಣಾ ಸಿದ್ದತೆಗಳು ಮತ್ತು ಚಟುವಟಿಕೆಗಳು ಗರಿಗೆದರಿವೆ.

ಈಗಾಗಲೇ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬ್ಲಾಕ್ ಮತ್ತು ವಾರ್ಡ್ ಸಮಿತಿಗಳಿಗೆ ಅಧ್ಯಕ್ಷರು, ಪದಾಧಿಕರಿಗಳ ನೇಮಕ, ಯುವ ಘಟಕಗಳಿಗೆ ನೇಮಕ ಹಾಗು ಪಕ್ಷಾಂತರ ಪರ್ವ ಶುರುವಾಗಿದೆ.

ಚುನಾವಣಾ ಆಯೋಗಕ್ಕೆ ಪತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಚುನಾವಣೆ ವೇಳೆ ನಿರ್ವಹಿಸಬೇಕಾದ ಕೆಲವು ವಿಚಾರಗಳ ಬಗ್ಗೆ ಸ್ಪಷ್ಟತೆಯನ್ನು ನೀಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕೂರಲು ಆಸನಗಳಿಲ್ಲ

ಪ್ರಸ್ತುತ ಜಾರಿಯಲ್ಲಿರುವ 198 ವಾರ್ಡ್ಗಳ ಪಾಲಿಕೆ ಸದಸ್ಯರಿಗೆ ಪೌರ ಸಭಾಂಗಣದಲ್ಲಿ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಆದರೆ, ಈಗ ಸುಪ್ರೀಂ ಕೋರ್ಟ್ನಿಂದ 243 ವಾರ್ಡ್ಗಳಿಗೆ ಚುನಾವಣೆ ನಡೆಸಲು ಆದೇಶಿಸಿದರೆ ಆಯ್ಕೆಯಾದ ಕೌನ್ಸಿಲ್ ಸದಸ್ಯರಿಗೆ ಕೂರಲು ಜಾಗವಿಲ್ಲ.

2021-22ನೇ ಸಾಲಿನ ಬಿಬಿಎಂಪಿ ಬಜೆಟ್ ನಲ್ಲಿ ಪಾಲಿಕೆಯ ಪೌರ ಸಭಾಂಗಣದ ನವೀಕರಣಕ್ಕೆ 10ಕೋಟಿ ರೂಪಾಯಿ ಅನುದಾನವನ್ನ ಮೀಸಲಿಡಲಾಗಿತ್ತು. ಇದೀಗ ಬಿಬಿಎಂಪಿ ಆರ್ಥಿಕ ಸಂಕಷ್ಟದ ನೆಪವೊಡ್ಡಿ ಕಾಮಗಾರಿಯನ್ನು ಮುಂದೂಡುತ್ತಿದೆ. ಒಂದು ವೇಳೆ ಚುನಾವಣೆ ಘೋಷಣೆಯಾದ ನಂತರ ತರಾತುರಿಯಲ್ಲಿ ಕಾಮಗಾರಿ ಕೈಗೊಂಡು ಕಳಪೆ ಕಾಮಗಾರಿ ನಡೆಸಿ ಟೀಕೆಗೆ ಗುರಿಯಾಗುವ ಸಾಧ್ಯತೆಗಳಿವೆ..

Tags: ashwath narayanBasavaraj BommaiBJPByrati BasavarajuCongress PartyCovid 19JDSJDS KarnatakaK GopalaiahSomannaST Somshekarಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹಾನಗಲ್ ಕ್ಷೇತ್ರಕ್ಕೆ ಏನು ಮಾಡಿಲ್ಲ : ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

Next Post

ಮೂಗೂರು : ನಿರ್ಮಾಣದ ಹಂತದ ವಾಲ್ಮೀಕಿ ಭವನದ ವಿವಾದ,ನ್ಯಾಯ ಕೇಳಿದ್ದಕ್ಕೆ ಹಲ್ಲೆ

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಮೂಗೂರು : ನಿರ್ಮಾಣದ ಹಂತದ ವಾಲ್ಮೀಕಿ ಭವನದ ವಿವಾದ,ನ್ಯಾಯ ಕೇಳಿದ್ದಕ್ಕೆ ಹಲ್ಲೆ

ಮೂಗೂರು : ನಿರ್ಮಾಣದ ಹಂತದ ವಾಲ್ಮೀಕಿ ಭವನದ ವಿವಾದ,ನ್ಯಾಯ ಕೇಳಿದ್ದಕ್ಕೆ ಹಲ್ಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada