• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

BBMP ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದೆ : ರಾಮಲಿಂಗಾ ರೆಡ್ಡಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
July 16, 2022
in ಕರ್ನಾಟಕ
0
BBMP ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದೆ : ರಾಮಲಿಂಗಾ ರೆಡ್ಡಿ ಆರೋಪ
Share on WhatsAppShare on FacebookShare on Telegram

ʼಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದ್ದು, ಬಿಜೆಪಿ ಪಕ್ಷಕ್ಕೆ ಅನುಕೂಲವಾಗುವಂತೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುವಂತೆ ಮಾಡಲಾಗಿದೆ. ಈ ಮರುವಿಂಗಡಣೆ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೆಪಗಳು ವ್ಯಕ್ತವಾಗಿದ್ದರೂ ಹೆಸರು ಬದಲಾವಣೆ ಹೊರತು ಯಾವುದೇ ವಾರ್ಡ್ ಗಳಲ್ಲಿ ಬದಲಾವಣೆ ತಂದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

ADVERTISEMENT

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಶನಿವಾರ ಮಾತನಾಡಿದ ಅವರು, ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧಿಸಿದಂತೆ ಸರ್ಕಾರ ವಾರ್ಡ್ ಮರುವಿಂಗಡಣೆ ಯನ್ನು ಪ್ರಕಟಿಸಿ, 15 ದಿನ ಆಆಕ್ಷೇಪಗಳಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೇಪಗಳು ಸಲ್ಲಿಕೆಯಾಗಿದ್ದು ಇದರಲ್ಲಿ ಹಲವು ಆಕ್ಷೇಪಗಳು ವಾರ್ಡ್ ಗಳ ಹೆಸರು ಬದಲಾವಣೆ ವಿಚಾರವಾಗಿವೆ. ಉಳಿದಂತೆ ಎಲ್ಲ ಆಕ್ಷೇಪಗಳು ಅವೈಜ್ಞಾನಿಕವಾಗಿ ವಾರ್ಡ್ ಮರುವಿಂಗಡಣೆ ಮಾಡಲಾಗಿದೆ ಎಂಬ ವಿಚಾರವಾಗಿ ಸಲ್ಲಿಕೆಯಾಗಿದೆ ಎಂದಿದ್ದಾರೆ.

ಅಮಿಬಾಗಳಿಗಾದರೂ ತಕ್ಕಮಟ್ಟಿಗೆ ಆಕಾರವಿರುತ್ತದೆ. ಆದರೆ ಈಗ ಮರುವಿಂಗಡಣೆಯಾದ ವಾರ್ಡ್ ಗಳಿಗೆ ಆಕಾರವೇ ಇಲ್ಲದಂತಾಗಿದೆ.

ಈ ವಿಚಾರವಾಗಿ ನಾನು ಈ ಹಿಂದೆ ಅನೇಕ ವಿಚಾರ ಹೇಳಿದ್ದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಕಂದಾಯ ಅಧಿಕಾರಿಗಳು, ಜಂಟಿ ಆಯುಕ್ತರು ಸೇರಿ ವಾರ್ಡ್ ಗಳ ಗಡಿ ಕುರಿತು ಚರ್ಚೆ ಮಾಡಿ ಮಾರ್ಗಸೂಚಿಯಂತೆ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ಈ ಬಾರಿ 28 ವಿಧಾನಸಭಾ ಕ್ಷೇತ್ರದ ಕಂದಾಯ ಅಧಿಕಾರಿಗಳಿಗೆ, ಜಂಟಿ ಆಯುಕ್ತರಿಗೆ ಯಾವುದೇ ಮಾಹಿತಿ ಇಲ್ಲ. ಈ ಮರುವಿಂಗಡಣೆ ಪ್ರಕ್ರಿಯೆ ಬಿಜೆಪಿ ಶಾಸಕರು, ಸಂಸದರ ಕಚೇರಿಯಲ್ಲಿ ನಿರ್ಧಾರವಾಗಿ ಕೇಶವಕೃಪದಲ್ಲಿ ಅಂತಿಮ ಒಪ್ಪಿಗೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಈಗ ಇಷ್ಟೋಂದು ಆಕ್ಷೇಪ ವ್ಯಕ್ತವಾದ ಬಳಿಕವೂ ಕಂದಾಯ ಅಧಿಕಾರಿಗಳಾಗಲಿ, ಜಂಟಿ ಆಯುಕ್ತರಾಗಲಿ ಬಂದು ಪರಿಶೀಲನೆ ನಡೆಸಲೇ ಇಲ್ಲ. ಈಗ ಈ ಆಕ್ಷೇಪಗಳು ಸಿಎಂ ಕಚೇರಿಯಂದ ಆಚೆ ಬರಲೇ ಇಲ್ಲ. 243 ವಾರ್ಡ್ ಗಳು ಸರಿಯಾಗಿವೆ ಎಂದು ಸಣ್ಣ ಬದಲಾವಣೆ ಇಲ್ಲದೆ ಮತ್ತೆ ಅದನ್ನೇ ಬಿಡುಗಡೆ ಮಾಡಿದ್ದಾರೆ. ಕೇವಲ ಹೆಸರಿಗೆ ಮಾತ್ರ ಆಕ್ಷೇಪಗಳನ್ನು ಸಂಗ್ರಹಿಸಿದ್ದಾರೆ ಎಂದರು.

ಈ ವಿಂಗಡಣೆ ಪ್ರಕ್ರಿಯೆ ಜನರಿಗೆ ಅನುಕೂಲವಾಗಲು ಮಾಡಿಲ್ಲ, ಬಿಜೆಪಿ ಪಕ್ಷಕ್ಕೆ ಅನುಕೂಲವಾಗುವಂತೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಎಲ್ಲಿ ಗೆಲ್ಲಲು ಸಾಧ್ಯವಿದೆಯೋ ಅಲ್ಲಿ ಮತ ವಿಭಜಿಸಿ ಸೋಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಪ್ರತಿ ಚುನಾವಣೆಯಲ್ಲೂ ಶೇ.20ರಷ್ಟು ತಟಸ್ಥ ಮತದಾರರು ಯಾವುದೇ ಪಕ್ಷಕ್ಕೆ ಸೇರದೆ ಮತಹಾಕುತ್ತಾರೆ. ಅವರು ಹಾಕುವ ಮತಗಳೇ ನಿರ್ಣಾಯಕವಾಗುತ್ತದೆ. ಈ ವಿಶ್ಲೇಷಣೆಯನ್ನು ಅವರು ಚುನಾವಣೆ ಫಲಿತಾಂಶ ಬಂದಾಗ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ಸದ್ಯ ನಮ್ಮ ಜನಸಂಖ್ಯೆ ಆಧಾರದ ಮೇಲೆ ನೋಡಿದರೆ, ಪ್ರತಿ ವಾರ್ಡ್ ಜನಸಂಖ್ಯೆ ಸರಾಸರಿ 35 ಸಾವಿರ ಇರಬೇಕು. ಕಾಂಗ್ರೆಸ್ ಪಕ್ಷ ಇರುವ ಕಡೆಗಳಲ್ಲಿ ಪ್ರತಿ ವಾರ್ಡ್ ಜನಸಂಖ್ಯಾ ಪ್ರಮಾಣ 36,753 ಮತದಾರರು ಇದ್ದಾರೆ. ಬಿಜೆಪಿ ಇರುವ ಕಡೆಗಳಲ್ಲಿ 33,927 ಮತದಾರರು ಬರುತ್ತಾರೆ. ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಗಳಲ್ಲಿ 30 ಸಾವಿರಕ್ಕಿಂತಲೂ ಕಡಿಮೆ ಮತದಾರರಿದ್ದಾರೆ. ಈ 35 ಸಾವಿರ ಸರಾಸರಿಯಲ್ಲಿ ನೋಡಿದರೆ ಬಿಜೆಪಿ ಇರುವ ಕ್ಷೇತ್ರಗಳಲ್ಲಿ 140 ವಾರ್ಡ್ ಗಳು ಇರಬೇಕಿತ್ತು. ಆದರೆ ಈಗ 145 ಸ್ಥಾನಗಳನ್ನು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ 103 ವಾರ್ಡ್ ಗಳು ಬರಬೇಕಿತ್ತು, ಆದರೆ ಕೇವಲ 98 ವಾರ್ಡ್ ಗಳನ್ನು ನೀಡಿದ್ದಾರೆ. ಬ್ಯಾಟರಾಯನಪುರ ಜಯನಗರ, ಚಾಮರಾಜಪೇಟೆ, ದಾಸರಳ್ಳಿ ಕ್ಷೇತ್ರಗಗಳಲ್ಲಿ ಜನಸಂಖ್ಯೆ ಪರಿಗಣಿಸಿದರೆ 1 ವಾರ್ಡ್ ಗಳನ್ನು ಕಡಿಮೆ ಮಾಡಿ ಅವುಗಳನ್ನು ಬಿಜೆಪಿ ಇರುವ ಕ್ಷೇತ್ರಗಳಲ್ಲಿ ಸೇರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಚಾಮರಾಜಪೇಟೆಯ ವಾರ್ಡ್ ಗಳಲ್ಲಿನ ಜನಸಂಖ್ಯೆ 39 ಸಾವಿರ ಸರಾಸರಿಯಲ್ಲಿದ್ದರೆ, ಪಕ್ಕದ ಚಿಕ್ಕಪೇಟೆ ಕ್ಷೇತ್ರದ ವಾರ್ಡ್ ಗಳಲ್ಲಿ ಜನಸಂಖ್ಯೆ ಪ್ರಮಾಣ 32 ಸಾವಿರ ಸರಾಸರಿಯಷ್ಟಿದೆ. ಇನ್ನು ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಗಳ ಜನಸಂಖ್ಯೆ ಸರಾಸರಿ 30 ಸಾವಿರಕ್ಕಿಂತ ಕಡಿಮೆ ಇದೆ. ಹೀಗೆ ಜನಸಂಖ್ಯೆ ಆಧಾರದಲ್ಲೂ ಬಿಜೆಪಿಗೊಂದು ರೀತಿ ಕಾಂಗ್ರೆಸ್ ಗೊಂದು ರೀತಿ ವಾರ್ಡ್ ವಿಂಗಡಣೆ ಮಾಡಿದ್ದಾರೆ. ಇನ್ನು ವಾರ್ಡ್ ಗಳ ಹೆಸರು ಬದಲಾವಣೆ ಅಧಿಕಾರ ಸರ್ಕಾರಕ್ಕಿದೆ. ಆದರೆ ಇಲ್ಲಿ ವಾರ್ಡ್ ಮರುವಂಗಡಣಾ ಸಮಿತಿಯೇ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಹೆಸರುಗಳನ್ನು ಬದಲಾವಣೆ ಮಾಡಿದೆ. ಆ ಮೂಲಕ ಈ ವಾರ್ಡ್ಗಳ ಮರುವಿಂಗಡಣೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇದೆ ಎಂಬುದು ಸಾಬೀತಾಗುತ್ತದೆ.’ ಎಂದು ಹೇಳಿದ್ದಾರೆ.

ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತಿರಿಸಿದ  ಅವರು,  ಈ ವಿಚಾರವಾಗಿ ನ್ಯಾಯಾಲಯದ ಮೋರೆ ಹೋಗುತ್ತೀರಾ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸೋಮವಾರ ವಕೀಲರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಪಡೆಯುತ್ತೇವೆ. ಇಲ್ಲಿ ನಮ್ಮ ಪಕ್ಷಕ್ಕೆ ತೊಂದರೆ ಆಗುವುದಕ್ಕಿಂತ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ನಾವು ಆಕ್ಷೇಪ ವ್ಯಕ್ತಪಡಿಸುತ್ತಿದ್ದೇವೆ. ಮಡಿವಾಳ ವ್ಯಾಪ್ತಿಯಲ್ಲಿ ಮಡಿವಾಳ ಗ್ರಾಮವೇ ಹೊರಗಿಡಲಾಗಿದೆ. ಕೇವಲ ಹೆಸರಿದ್ದು, ಗ್ರಾಮವಿಲ್ಲವಾಗಿದೆ. ಪ್ರತಿ ಕ್ಷೇತ್ರದ ಕಂದಾಯ ಅಧಿಕಾರಿಗಳು ಈ ಕೆಲಸ ಮಾಡಿದ್ದರೆ ಅವರಿಗೆ ಈ ಜ್ಞಾನವಿರುತ್ತಿತ್ತು. ಆದರೆ ಬಿಜೆಪಿ ಶಾಸಕರು ಮಂತ್ರಿಗಳ ಆದೇಶದಂತೆ ಮಾಡಲಾಗಿದೆ. ಹೀಗಾಗಿ ಈ ರೀತಿ ಆಗಿದೆ’ ಎಂದು ಉತ್ತರಿಸಿದರು.

ಈ ವಿಚಾರವಾಗಿ ಚುನಾವಣೆ ಮುಂದೂಡುವಂತೆ ಆಗ್ರಹಿಸುತ್ತೀರಾ ಎಂಬ ಪ್ರಶ್ನೆಗೆ, ‘ಈ ವಿಚಾರವನ್ನು ಒಂದು ವಾರದಲ್ಲಿ ಸರಿಪಡಿಸಬಹುದು. ನಾವು ಚುನಾವಣೆ ಮುಂದೂಡುವಂತೆ ಹೇಳುವುದಿಲ್ಲ. ನಾವು ನ್ಯಾಯಾಲಯಕ್ಕೆ ಹೋದರೂ 10-15 ದಿನಗಳಲ್ಲಿ ಅರ್ಜಿ ಇಥ್ಯರ್ಥ ಮಾಡಿ ಎಂದು ಕೇಳುತ್ತೇವೆ’ ಎಂದರು.

ಅನುದಾನ ತಾರತಮ್ಯ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಪದೇ ಪದೆ ಒಂದು ಮಾತು ಹೇಳುತ್ತೇನೆ. ಬೆಂಗಳೂರು ಅಭಿವೃದ್ಧಿ ಎಂದರೆ 28 ಕ್ಷೇತ್ರಗಳ ಅಭಿವೃದ್ಧಿಯೇ ಹೊರತು, ಕೇವಲ ಬಿಜೆಪಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿಯಲ್ಲ. ಬಿಜೆಪಿ ಶಾಸಕರಿಗೆ ಮಾತ್ರ ಅನುದಾನ ಕೊಟ್ಟು, ಕಾಂಗ್ರೆಸ್ ಜೆಡಿಎಸ್ ಕ್ಷಏತ್ರಗಳಇಗೆ ಅನುದಾನ ನೀಡದಿದ್ದರೆ, ಅಭಿವೃದ್ಧಿ ಆಗುವುದಿಲ್ಲ. ಅದು ಬೆಂಗಳೂರು ಅಭಿವೃದ್ಧಿ ಹೇಗೆ ಸಾಧ್ಯ? ಆಗ ನೀವು ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳಬೇಡಿ. ಆ ಹಕ್ಕು ನಿಮಗಿಲ್ಲ. ಕೇವಲ ಬಿಜೆಪಿ ಶಆಸಕರ ಕ್ಷೇತ್ರ ಅಭಿವೃದ್ಧಿ ಎಂದು ಹೇಳಿಕೊಳ್ಳಲಿ. ಬಿಜೆಪಿ ಶಾಸಕರಿಗೆ 2718 ಕೋಟಿ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 1022 ಕೋಟಿ, ಜೆಡಿಎಸ್ ನ ದಾಸರಹಳ್ಳಿ ಕ್ಷೇತ್ರಕ್ಕೆ 125 ಕೋಟಿ ಕೊಟ್ಟಿದ್ದಾರೆ. ಅತಿ ಕಡಿಮೆ ಅನುದಾನ ಕೊಟ್ಟಿರುವುದು ಜಯನಗರ ಹಾಗೂ ವಿಜಯನಗರ ಕ್ಷೇತ್ರಗಳಿಗೆ ಕೇವಲ 60 ಕೋಟಿ ನೀಡಲಾಗಿದೆ’ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅಕ್ರಮಗಳ ಕುರಿತು ತನಿಖೆ ಮಾಡುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾವು ಅಧಿಕಾರ ಕಳೆದುಕೊಂಡು 4 ವರ್ಷವಾಗಿದ್ದು, ಕಳೆದ ಮೂರು ವರ್ಷಗಳಿಂದ ಅವರು ಆಡಳಿತ ನಡೆಸುತ್ತಿದ್ದಾರೆ. ನಮ್ಮ ಅವಧಿಯಲ್ಲಿ ಅಕ್ರಮ ನಡೆದಿದ್ದರೆ, ಕಳೆದ 3 ವರ್ಷಗಳಲ್ಲಿ ತನಿಖೆ ಮಾಡಬಹುದಿತ್ತು. ಬೇಡ ಎಂದಿದ್ದೆವಾ? ನಾವು ಅವರನ್ನು ಕಟ್ಟಿಹಾಕಿದ್ದೆವಾ? ಅವರದೇ ಸರ್ಕಾರ ಇತ್ತು, ಅವರು ಯಾವ ತನಿಖೆ ಬೇಕಾದರೂ ಮಾಡಬಹುದಿತ್ತು. ಈಗ ಅವರ ಮೇಲೆ ಆರೋಪ ಬಂದಿದೆ ಎಂದು ಈ ರೀತಿ ಹೇಳುತ್ತಿದ್ದಾರೆ. ನಮ್ಮ ಕಾಲದಲ್ಲಿ ಅಕ್ರಮ ನಡೆದಿದ್ದರೆ ತನಿಖೆ ಮಾಡಿ ಯಾರು ಬೇಡ ಎಂದರು? ಮೂರು ವರ್ಷದಿಂದ ಕಡಲೆ ಕಾಯಿ ತಿನ್ನುತ್ತಿದ್ದರಾ? ಈಗ ಜ್ಞಾನೋದಯ ಆಗಿದೆಯಾ? ಆಗ ವಿರೋಧ ಪಕ್ಷದಲ್ಲಿದ್ದಾಗ ಏನು ಮಾಡುತ್ತಿದ್ದಿರಿ? ಆಗಲೇ ವಿಧಾನಸಭೆಯಲ್ಲಿ ಮಾತನಾಡಬಹುದಿತ್ತು, ಲೋಕಯುಕ್ತ, ಎಸಿಬಿಗೆ ದೂರು ನೀಡಬಹುದಿತ್ತು. ನಿಮ್ಮದೇ ಕೇಂದ್ರ ಸರ್ಕಾರಕ್ಕೆ ಹೇಳಿ ತನಿಖೆ ಮಾಡಿಸಬಹುದಿತ್ತು ಯಾಕೆ ಮಾಡಲಿಲ್ಲ’ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಹುಟ್ಟು ಹಬ್ಬ ಕಾರ್ಯಕ್ರಮ ಕುರಿತು ಪಕ್ಷದಲ್ಲಿ ಅಸಮಾಧ್ನಾ ಇದೆಯೇ ಎಂದು ಕೇಳಿದಾಗ, ‘ಅದೆಲ್ಲಾ ಸುಳ್ಳು. ಅವರ ಜನ್ಮದಿನ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ. ರಾಹುಲ್ ಗಾಂಧಿ ಅವರು ಬರುತ್ತಿದ್ದಾರೆ. ಯಡಿಯೂರಪ್ಪ ಅವರ 60ನೇ ಹುಟ್ಟುಹಬ್ಬವನ್ನು ಅರಮನೆ ಮೈದಾನದಲ್ಲಿ ಮಾಡಿದ್ದರು. ಆಗಲೇ ಅವರಿಗೆ ರಾಜಾ ಹುಲಿ ಎಂದು ಹೆಸರು ನೀಡಲಾಯಿತು. 60, 75 ವರ್ಷ ಪೂರೈಸುವುದು ವಿಶೇಷ. ಹೀಗಾಗಿ ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ಮನೆಯಲ್ಲಿ ದೊಡ್ಡವರಿಗೆ ಷಷ್ಠಿ ಪೂಜೆ ಮಾಡುವುದಿಲ್ಲವೇ?’ ಎಂದು ತಿಳಿಸಿದರು.

ಶಿವಕುಮಾರ್ ಅವರ ಉತ್ಸವ ಮಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸದ್ಯಕ್ಕೆ ಆ ರೀತಿ ಯಾವುದೇ ಆಲೋಚನೆ ಇಲ್ಲ. ಅವರಿಗೆ 75 ವರ್ಷ ಪೂರ್ಣಗೊಂಡ ನಂತರ ನೋಡಿಕೊಳ್ಳೋಣ. ಅವರಿಗೆ ಇನ್ನೂ 60 ವರ್ಷ ಇನ್ನು 15 ವರ್ಷ ಸಮಯಾವಕಾಶವಿದೆ’ ಎಂದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

30% ಕಮಿಷನ್‌ ಆರೋಪ : ಕಟ್ಟಾ ಸುಬ್ರಹ್ಮಣ್ಯಗೆ 11 ನೇರ ಪ್ರಶ್ನೆ ಕೇಳಿದ ಭೈರತಿ ಸುರೇಶ್

Next Post

ಮಂಡಕ್ಕಿ ಉತ್ಪಾದನೆ ಮೇಲಿನ ಜಿಎಸ್‍ಟಿ ರದ್ದುಗೊಳಿಸಿ : ಸಿದ್ದರಾಮಯ್ಯ ಆಗ್ರಹ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಮಂಡಕ್ಕಿ ಉತ್ಪಾದನೆ ಮೇಲಿನ ಜಿಎಸ್‍ಟಿ ರದ್ದುಗೊಳಿಸಿ : ಸಿದ್ದರಾಮಯ್ಯ ಆಗ್ರಹ

ಮಂಡಕ್ಕಿ ಉತ್ಪಾದನೆ ಮೇಲಿನ ಜಿಎಸ್‍ಟಿ ರದ್ದುಗೊಳಿಸಿ : ಸಿದ್ದರಾಮಯ್ಯ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada