ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ಜಿಲ್ಲಾಧಿಕಾರಿಯನ್ನು ಸೇವೆಯಿಂದ ಅಮಾನತ್ತು ಮಾಡಿದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೆ ತನಿಖೆ ಹೆಸರಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ನೌಕರರ ಸಂಘದ ಸದಸ್ಯರು ಮೊದಲನೆಯದಾಗಿ ಪಾಲಿಕೆ ಅಧಿಕಾರಿಗಳು & ನೌಕರರು ಮತದಾರರ ಹೆಸರನ್ನು ಪಟ್ಟಿಯಿಂದ ಅಕ್ರಮವಾಗಿ ತೆಗೆದು ಹಾಕಿಲ್ಲ. ಕೇಂದ್ರ ಚುನಾವಣಾ ಆಯೋಗದ ನಿಯಮಾವಳಿಯಂತೆಯೇ ಪಾಲಿಕೆ ಅಧಿಕಾರಿಗಳು & ನೌಕರರು ನಡೆದುಕೊಂಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ PSE ಮಾದರಿ ಪರಿಶೀಲಿಸಿ ಮತದಾರರ ಪಟ್ಟಿ ಪರಿಶೀಲಿಸಲಾಗಿದೆ. PSE – Photo Similar Entries (ಒಂದೇ ಮಾದರಿಯ ಫೋಟೋ, ಮಾಹಿತಿ ಇರುವ ಎರಡಕ್ಕಿಂತ ಅಧಿಕ ಮತದಾರರು) ಮತದಾರರ ಹೆಸರನ್ನು ಖಾಸಗಿ ಸಂಸ್ಥೆಯೊಂದು ಡಿಲೀಟ್ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ERO Net ಸಾಫ್ಟ್‌ವೇರ್ ಕಂಟ್ರೋಲ್ ಇರೋದು ಕೇಂದ್ರ ಚುನಾವಣಾ ಆಯೋಗದ ಬಳಿ PSE ಮಾದರಿಯ ಡಿಲೀಷನ್ ಮಾಡುವ ಪ್ರಕ್ರಿಯೆ ಕೇವಲ ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಪಟ್ಟಿದ್ದಲ್ಲ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲೂ ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ.
ಹೀಗಾಗಿ ಈ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳ ಹಾಗೂ ನೌಕರರಿಗೆ ಯಾವುದೇ ಪಾತ್ರ ಇರೋದಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿ ಬಿಬಿಎಂಪಿ ನೌಕರರ ಸಂಘದ ಸದಸ್ಯರು ಸ್ಪಷ್ಟನೆ ನೀಡಿದ್ದಾರೆ.