
ಹಾವೇರಿ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಪುತ್ರಿ ದಿಢೀರ್ ರಾಜಿನಾಮೆ ನೀಡಿದ್ದಾರೆ. ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜಿನಾಮೆ ಸಲ್ಲಿಸಿದ್ದಾರೆ. ಮಾಜಿ ಸಚಿವ ಬಿ.ಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್, ಒಂದು ವರ್ಷಗಳ ಕಾಲ ಗೃಹಿಣಿಯಾಗಿ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ. ಆದರೆ ನಿರೀಕ್ಷಿಸಿದಷ್ಟು ಕೆಲಸ ನನ್ನಿಂದ ಆಗಿಲ್ಲ ಭಾವನೆ ಕಾಡುತ್ತಿದೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. ಈ ಸ್ಥಾನಕ್ಕೆ ಅನ್ಯಾಯ ಆಗಬಾರೆದಂದು ಈ ಸ್ಥಾನಕ್ಕೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಸೃಷ್ಟಿ ಪಾಟೀಲ್.

ಬಿ.ಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ದಿಢೀರ್ ರಾಜಿನಾಮೆ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಕಳೆದ ಒಂದು ವರ್ಷದಿಂದ ಮಹಿಳಾ ಮೋರ್ಚಾದ ಸ್ಥಾನದ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಕುಟುಂಬದ ಮತ್ತು ಶಿಕ್ಷಣ ಸಂಸ್ಥೆ ನಿರ್ವಹಣೆಯಲ್ಲಿ ರಾಜಕಾರಣಕ್ಕೆ ಹೆಚ್ಚಿನ ಒತ್ತು ನೀಡಲು ಆಗಿಲ್ಲ. ಆದರೂ ಒಂದು ವರ್ಷ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ರಾಣೆಬೆನ್ನೂರಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಈ ಬಗ್ಗೆ ಬಿ.ಸಿ ಪಾಟೀಲ್ ನನ್ನ ಜೊತೆ ಪೋನ್‌ನಲ್ಲಿ ಮಾತನಾಡಿದ್ದಾರೆ. ಮತ್ತೊಂದು ಬಾರಿ ಮನವೋಲಿಸಿ ಜವಾಬ್ದಾರಿ ನಿರ್ವಹಿಸಲು ಹೇಳುತ್ತೇನೆ ಎಂದಿದ್ದಾರೆ. ನಮ್ಮ ಪಕ್ಷದ ಅವರು ಈ ಸ್ಥಾನವನ್ನ ನಿರಾಕರಿಸಿದ್ರೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಮಹಿಳಾ ಕಾರ್ಯಕರ್ತರು ಜವಾಬ್ದಾರಿ ನಿರ್ವಹಿಸಲು ಸಿದ್ದರಿದ್ದಾರೆ. ಇದಕ್ಕೆ ಯಾವುದೇ ರಾಜಕೀಯ ಬಣ್ಣವಿಲ್ಲ ಎಂದಿದ್ದಾರೆ.
