ಬೇಗ ಸ್ನಾನ ಮಾಡಿ. ನೀರು ಮಿತವಾಗಿ ಬಳಸಿ ಎಂದು ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ಭಾರತ ತಂಡದ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಿದೆ.
ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಬಂದಿಳಿದಿದೆ. ರಾಜಧಾನಿ ಹರಾರೆಯಲ್ಲಿ ನೀರಿಗೆ ಹಾಹಾಕಾರ ತಲೆದೂರಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ನೀರನ್ನು ಮಿತವಾಗಿ ಬಳಸುವಂತೆ ಬಿಸಿಸಿಐ ಸೂಚಿಸಿದೆ.
ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ಕಳೆದ ಒಂದು ವರ್ಷದಿಂದ ನೀರಿನ ಸಮಸ್ಯೆ ತಲೆದೂರಿದೆ. ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಈ ನಡುವೆ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಜಿಂಬಾಬ್ವೆಯ ಹರಾರೆಯಲ್ಲಿದೆ.

ಮೂರು ಏಕದಿನ ಪಂದ್ಯ ಕೂಡ ಹರಾರೆಯಲ್ಲಿ ನಡೆಯುತ್ತಿದೆ. ಇದೀಗ ಅಟಗರರು ಹರಾರೆಯ ಹೋಟೆಲ್ ಒಂದರಲ್ಲಿ ತಂಗಿದ್ದು, ಅಲ್ಲಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು ವೇಸ್ಟ್ ಮಾಡಬೇಡಿ ಎಂದು ಆಟಗಾರರಿಗೆ ಖಡಕ್ ಸೂಚನೆ ನೀಡಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 18, 20, 22 ರಂದು ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಕನ್ನಡಿಗ ಕೆ.ಎಲ್ ರಾಹುಲ್ ಸಾರಥ್ಯದ ಟೀಂ ಇಂಡಿಯಾ ಹರಾರೆಯಲ್ಲಿ ಅಭ್ಯಾಸ ಆರಂಭಿಸಿದೆ.






