• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

N Chaluvarayaswamy: ಕೋಮು ಗಲಭೆ ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕೋಮು ಗಲಭೆ ಚಿಕ್ಕದಾಗಿರಲಿ ದೊಡ್ಡದಾಗಿರಲಿ ಅದು ಜಿಲ್ಲೆಗೆ ಕಳಂಕ. ಅಧಿಕಾರಿಗಳು ಜಿಲ್ಲೆಯಲ್ಲಿ ಕೋಮು ಗಲಭೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ADVERTISEMENT

ಅವರು ಇಂದು ಮದ್ದೂರು ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಳೆ ಮದ್ದೂರು ತಾಲ್ಲೂಕಿನಲ್ಲಿ ನಡೆಯಲಿರುವ ಸಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ಭಾಗವಹಿಸಬೇಕು ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದರು.

ಪೊಲೀಸ್ ಇಲಾಖೆ ವತಿಯಿಂದ ದೊಡ್ಡ, ದೊಡ್ಡ ಗಲಭೆಗಳನ್ನು ನಿಯಂತ್ರಿಸಲಾಗಿದೆ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಲಾಗಿದೆ. ಮದ್ದೂರು ತಾಲ್ಲೂಕಿನಲ್ಲಿ ನಡೆದಿರುವ ಗಲಭೆಗೆ ಕಾರಣವಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಶಾಂತಿ ಕದಡುವ ಕಿಡಿಗೇಡಿಗಳು ನಿಮ್ಮ ಸುತ್ತ ಮುತ್ತಲೇ ಇರುತ್ತಾರೆ. ಸಾರ್ವಜನಿಕರು ಹಾಗೂ ಮುಖಂಡರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಕಿವಿಮಾತು ಹೇಳಿದರು.

ಹಿಂದೂ, ಮುಸ್ಲಿಂ ಸಮುದಾಯದವರು ಸಮಾಜದಲ್ಲಿ ಒಟ್ಟಿಗೆ ಬಾಳಬೇಕು, ಕೆಲವು ಕಿಡಿಗೇಡಿಗಳು ನಡೆಸುವ ಕೃತ್ಯಕ್ಕೆ ಜೀವನ ನಡೆಸುವುದು ಕಷ್ಟಕರವಾಗಿರುತ್ತದೆ. ವಿವಿಧ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ನಡೆಯುವ ಮೆರವಣಿಗೆಗಳಲ್ಲಿ ತಾಳ್ಮೆಯಿಂದ ವರ್ತಿಸಿ ಎಂದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಮಾತನಾಡಿ ಸ್ವಾತಂತ್ರ್ಯ ಹೋರಾಟಕ್ಕೆ ಹೆಸರುವಾಸಿಯಾಗಿರುವ ಮದ್ದೂರು ತಾಲ್ಲೂಕಿನಲ್ಲಿ ಕೋಮು ಗಲಭೆಗಳು ಬೇಡ. ಸರ್ಕಾರ ಜಿಲ್ಲೆಗೆ ಸಕ್ಕರೆ ಕಾರ್ಖಾನೆ ಅಭಿವೃದ್ಧಿ ಸೇರಿದಂತೆ ನಾಲೆಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸಾರ್ವಜನಿಕರು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದರು.

ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅವರು ಮಾತನಾಡಿ ರಾಜ್ಯದಲ್ಲಿ 77 ಸಾವಿರ ಗಣೇಶ ಮೂರ್ತಿಗಳು ಹಾಗೂ .ಮಂಡ್ಯದಲ್ಲಿ 3,700 ಗಣೇಶ ಪ್ರತಿಷ್ಠಾಪನೆ ಆಗಿದೆ.
ಎಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕಿಡಿಗೇಡಿಗಳು ಎಸಗಿರುವ ಅಹಿತಕರ ಘಟನೆಯನ್ನು ದೊಡ್ಡದಾಗಿ ಬಿಂಬಿಸಿ ಶಾಂತಿ ಕದಡುವುದು ಬೇಡ. ತಪ್ಪಿತಸ್ಥರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದರು

ಶಾಸಕ ಉದಯ್ ಅವರು ತಾಲ್ಲೂಕಿನ ಅಭಿವೃದ್ಧಿಗೆ 1,300 ಕೋಟಿ ರೂ. ಅನುದಾನ ತಂದಿದ್ದಾರೆ. ಬಹಳ ವರ್ಷಗಳಿಂದ ತಾಲ್ಲೂಕಿನಲ್ಲಿ ಅಭಿವೃದ್ಧಿ ಆಗಿರಲಿಲ್ಲ.
ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ಉದಯ್ ಅಭಿವೃದ್ಧಿ ಮಾಡುತ್ತಿದ್ದಾರೆ.
ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ ಎಂದರು.

ಜಿಲ್ಲಾಧಿಕಾರಿ ಡಾ ಕುಮಾರ ಅವರು ಮದ್ದೂರಿನಲ್ಲಿ ನಡೆದ ಘಟನೆಯಿಂದಾಗಿ ಬೇಸರವಾಗಿದೆ. ಗಣೇಶ ಹಬ್ಬದ ಮುಂಚಿತವಾಗಿಯೇ ಎಲ್ಲಾ ಧರ್ಮದ ಮುಖಂಡರುಗಳೊಂದಿಗೆ ಸಭೆ ಕರೆದು ವ್ಯವಸ್ಥಿತವಾಗಿ ಹಬ್ಬವನ್ನು ಆಚರಿಸಲು ಸೂಚಿಸಲಾಗಿತ್ತು. ವಿವಿಧತೆಯಲ್ಲಿ ಏಕತೆ ಎಂದು ಕೇವಲ ಮಾತಿನಲ್ಲಿ ಹೇಳಿದರೆ ಸಾಲದು ಅದನ್ನು ಅನುಸರಿಸಬೇಕು. ನಾವೆಲ್ಲರೂ ಸಹ ಸೌಹಾರ್ದತೆಯಿಂದ ಬದುಕಬೇಕು. ಧಾರ್ಮಿಕ ಭಾವನೆಗೆ ದಕ್ಕೆ ತರುವಂತಹ ಕೆಲಸ ಯಾರು ಮಾಡಬಾರದು ಹೇಳಿದರು.

ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ, ಈ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುವರಿಗೆ ಕಾನೂನು ಪಾಠ ಕಲಿಸುತ್ತದೆ. ನಮ್ಮ ಮಕ್ಕಳು ದಾರಿ ತಪ್ಪಿದ್ದಾರೆ ಎಂದರೆ ಅದರ ಜವಾಬ್ದಾರಿಯನ್ನು ನಾವು ಹೊರಬೇಕು ಮಕ್ಕಳಿಗೆ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ಕೆಲಸಗಳಲ್ಕಿ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸದಂತೆ ತಿಳಿ ಹೇಳಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಸಿ‌ ಸಿ ಟಿ ವಿ ಹಾಗೂ ತಂತ್ರಜ್ಞಾನದ ಸಹಾಯದಿಂದ ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಘಟನೆ ಆಕಸ್ಮಿಕವೋ ಅಥವಾ ಪೂರ್ವನಿಯೋಜಿತವೂ ಎಂದು ತನಿಖೆ ನಡೆಸಲಾಗುವುದು. ಸಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪಸರಿಸುವ ಮೂಲಕ ಸಮಾಜದ ಶಾಂತಿಯನ್ನು ಕದಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜಾರಿಗೊಳಿಸಲಾಗುವುದು ಎಂದು ಎಚ್ಚರಿಸಿದರು.

ನಾಳೆ ಸಾಮೂಹಿಕ ಗಣೇಶ ವಿಗ್ರಹ ವಿಸರ್ಜನೆ ಆಯೋಜಿಸಲಾಗಿದೆ ಪೊಲೀಸ್ ಇಲಾಖೆ ಇದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿಶೇಷ ಟಾಸ್ಕ್ ಫೋರ್ಸ್ ತಂಡಗಳನ್ನು ರಚಿಸಲಾಗಿದೆ. ಮದ್ದೂರು ನಗರದಲ್ಲಿ ಶಾಂತಿ ಕಾಪಾಡಲು ಸಿದ್ದರಿದ್ದೇವೆ ಪೊಲೀಸ್ ಇಲಾಖೆ ನಿಮ್ಮ ಜೋತೆ ಇದೆ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Tags: agriculture minister n chaluvarayaswamyChaluvarayaswamychaluvarayaswamy mlaformer mla chaluvarayaswamyMinister N ChaluvarayaswamyN Chaluvaraya Swamyn chaluvarayaswamyn chaluvarayaswamy ajit hanamakkamakkanavarn chaluvarayaswamy condoles youth familyn chaluvarayaswamy in suvarna newsn chaluvarayaswamy latest newsn chaluvarayaswamy on prajwal revannan chaluvarayaswamy on prajwal revanna pen drive casen chaluvarayaswamy speechN Cheluvarayaswamyn. chaluvarayaswamy
Previous Post

ಧರ್ಮ ಕಾಲಂನಲ್ಲಿ ಹಿಂದೂ; ಕಸುಬು ಕಾಲಂನಲ್ಲಿ ನೇಕಾರಿಕೆ ನಮೂದಿಸಿ-ಬಿ.ಎಸ್. ಸೋಮಶೇಖರ್

Next Post

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ..!!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada