• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದ್ಯತೆಯ ಮೇರೆಗೆ ಆಸಕ್ತಿ ವಹಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ADVERTISEMENT

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಇಂದು ಸಚಿವರು ಐದು ಗಂಟೆಗಳಿಗೂ ಹೆಚ್ಚು ಕಾಲ ವಿಡಿಯೋ ಸಭೆ ನಡೆಸಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಪಂಚಾಯತ್‌ ರಾಜ್‌ ಎಂಜನಿಯರಿಂಗ್‌ ಇಲಾಖೆ, ಗ್ರಾಮೀಣ ನೀರು ಸರಬರಾಜು ಇಲಾಖೆ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಂಸ್ಥೆಯ ಮೂಲಕ ನಡೆಯುತ್ತಿರುವ ಕಾಮಗಾರಿಗಳನ್ನು ನಿಯಮಿತವಾಗಿ ಪರಿಶೀಲನೆ ಮಾಡುವ ಹೊಣೆಗಾರಿಕೆಯನ್ನು ಅಧಿಕಾರಿಗಳು ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕೆಂದು ಸಲಹೆ ಮಾಡಿದರು. ಈ ತಿಂಗಳ 15ರಿಂದ 31ರವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ತೀವ್ರ ಪ್ರವಾಸ ಮಾಡಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಬೇಕಲ್ಲದೆ, ಕೆಲವಾರು ಕಡೆ ಕಾಮಗಾರಿಗಳು ಕುಂಠಿತಗೊಂಡಿದ್ದು ಅವುಗಳಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಪೂರ್ಣ ವಿವರಗಳನ್ನು ಒಳಗೊಂಡ ವರದಿಯನ್ನು ಆಗಸ್ಟ್‌ ಮೊದಲ ವಾರದಲ್ಲಿ ಸರ್ಕಾರಕ್ಕೆ ರವಾನಿಸಬೇಕೆಂದು ಸಚಿವರು ಆದೇಶ ನೀಡಿದರು.

ಹಸಿರುಪಥ: ಮಳೆಗಾಲದಲ್ಲಿ ಗಿಡ ನೆಡಲು ಕ್ರಮ ಆಗಲಿ
ರಸ್ತೆ ಬದಿ ಗಿಡ ನೆಡುವ ʼಹಸಿರು ಪಥʼ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಾಗಿದೆ, ಮಳೆಗಾಲ ಮುಗಿಯುವುದರೊಳಗೆ ಗಿಡಗಳನ್ನು ನೆಡಲು ನರೇಗಾ ಮೂಲಕ ವ್ಯಾಪಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಜಿಲ್ಲೆಗಳಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಅಧಿಕಾರಿಗಳೊಂದಿಗೆ ಚರ್ಚಿಸಿ ಸಸಿಗಳನ್ನು ನೆಡಬೇಕಾದ ಗ್ರಾಮೀಣ ರಸ್ತೆಗಳನ್ನು ನಿರ್ಣಯಿಸಬೇಕೆಂದು ಸಚಿವರು ಸೂಚಿಸಿದರು.


ಮಳೆಗಾಲ ಆರಂಭಗೊಂಡಿದ್ದು ಕೆಲವೆಡೆ ವ್ಯಾಪಕ ಮಳೆ ಆಗುತ್ತಿದೆ, ಮುಂದಿನ ಕೆಲವು ತಿಂಗಳು ಮಳೆ ಆಗುವ ಮುನ್ಸೂಚನೆಯಿದ್ದು, ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿರುವುದರಿಂದ ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು, ಜಲಮೂಲಗಳ ಬಳಿ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರಲ್ಲದೆ, ನೀರು ಕಲುಷಿತಗೊಂಡು ಯಾವುದೇ ದುಷಪರಿಣಾಮಗಳಾದಲ್ಲಿ ಎಂಜನಿಯರ್‌ಗಳು, ಇಒ ಹಾಗೂ ಪಿಡಿಒಗಳನ್ನು ಹೊಣೆಯಾಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಘನತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಬರತ್ತಿವೆ, ಜಿಲ್ಲಾ ಮಟ್ಟದಲ್ಲಿ ಆ ಪ್ರದೇಶಗಳಿಗೆ ಅನುಗುಣವಾಗಿ ತ್ಯಾಜ್ಯ ನಿರ್ವಹಣೆಗೆ ಮಾರ್ಗೋಪಾಯಗಳನ್ನು ಕಂಡು ಹಿಡಿದು ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಲಹೆ ಮಾಡಿದರು.

ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಿ

ಸಾರ್ವಜನಿಕರು ನೀಡುವ ದೂರು, ಮನವಿಗಳನ್ನು ಆದ್ಯತೆಯ ಮೇಲೆ ಪರಿಹರಿಸಬೇಕೆಂದು ನಿರ್ದೇಶಿಸಿದರು.
ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌, ಇಲಾಖೆಯ ಕಾರ್ಯದರ್ಶಿ ಸಮೀರ್‌ ಶುಕ್ಲ, ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್‌ ಚರ್ಚೆಯಲ್ಲಿ ಪಾಲ್ಗೊಂಡರು.

Tags: BJPCongress PartyMinister Priyank KhargePriyank Khargepriyank kharge audiopriyank kharge bookedpriyank kharge bytepriyank kharge mumthaspriyank kharge newspriyank kharge on bjppriyank kharge on modipriyank kharge on rsspriyank kharge on slamspriyank kharge rss banpriyank kharge speechpriyank kharge updatespriyank kharge videopriyank kharge videospriyank kharge vs bjpPriyanka Khargepriyanka kharge ministerpriyanka kharge on hd kumarswamyrss priyank kharge
Previous Post

Dinesh Gundu Rao: ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada