• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

“ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ.ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ.ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ADVERTISEMENT

“ಅಂದು 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ ಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು” ಎಂದು ತಿಳಿಸಿದರು.

“ಇಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು” ಎಂದು ಹೇಳಿದರು.

“ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲಾ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ” ಎಂದರು.

ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, “ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು” ಎಂದು ತಿಳಿಸಿದರು.

ದೇಶದಾದ್ಯಂತ ಎಷ್ಟು ಜನ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ ಎಂದು ಕೇಳಿದಾಗ, “ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500ರಿಂದ 600 ಜನ ಕಾಂಗ್ರೆಸ್ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

Tags: 600 Congress leadersAICCBelagavi session centenary;Belgaum AirportDCM DK ShivakumarJawahar Lal Nehru and Gangadhar Deshpande.Program to celebrate the country's history:Suvarna Soudha
Previous Post

ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ಯೋಜನೆಗಳ ಅಂತ್ಯದ ಬಗ್ಗೆ ಸಮಿತಿಯು ಕಳವಳ ವ್ಯಕ್ತಪಡಿಸಿದೆ,

Next Post

ಬಿಜೆಪಿ ಯಲ್ಲಿ ಎಷ್ಟು ಜನ ಕಾಮುಕರು ಇದಾರೆ ಗೊತ್ತಾ? ಲಾಯರ್ ಜಗದೀಶ್ ಮಾತು.!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಬಿಜೆಪಿ ಯಲ್ಲಿ ಎಷ್ಟು ಜನ ಕಾಮುಕರು ಇದಾರೆ ಗೊತ್ತಾ? ಲಾಯರ್ ಜಗದೀಶ್ ಮಾತು.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada