ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸ್ಥವನಿಧಿ ಸಮೀಪ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರಿನೊಳಗಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಹೌದು, ಬಾಬು ಪಾಟೀಲ (60), ಪತ್ನಿ ಛಾಯಾ ಅದಗೊಂಡ ಪಾಟೀಲ (55), ಚಂಪಾತಾಯಿ ಬಾಳೆಷಾ ಮಗದುಮ್ಮ (85) ಮತ್ತು ಸದಲಗಾದ ಮಹೇಶ ದೇವಗೊಂಡ ಪಾಟೀಲ (28) ಎಂಬುವವರೇ ಮೃತಪಟ್ಟ ದುರ್ದೈವಿಗಳು ಎಂದು ಗುರಿತಿಸಲಾಗಿದೆ.
ಪೂಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 4ರಲ್ಲಿ ಅಪಘಾತ ಸಂಭವಿಸಿದ್ದು, ಮೃತರು ಸಂಚರಿಸುತ್ತಿದ್ದ ಕಾರು ಕೊಲ್ಲಾಪುರದಿಂದ ಬೆಳಗಾವಿ ಕಡೆಗೆ ಹೊರಟಿತ್ತು ಎಂದು ನಿಪ್ಪಾಣಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ನಿಪ್ಪಾಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.