• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರವನ್ನೇ ಬಲಿ ಪಡೆಯುತ್ತಾ ಬೆಳಗಾವಿ ರಾಜಕಾರಣ..?

ಕೃಷ್ಣ ಮಣಿ by ಕೃಷ್ಣ ಮಣಿ
January 15, 2025
in Top Story, ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರವನ್ನೇ ಬಲಿ ಪಡೆಯುತ್ತಾ ಬೆಳಗಾವಿ ರಾಜಕಾರಣ..?
Share on WhatsAppShare on FacebookShare on Telegram

ADVERTISEMENT

ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಚೇರಿ ನಿರ್ಮಾಣ ಮಾಡಿದ್ದು ನಾನು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಕಾಂಗ್ರೆಸ್‌ ಕಚೇರಿಗೆ ಜಾಗ ಕೊಡಿಸಿದ್ದು ರಮೇಶ್ ಜಾರಕಿಹೊಳಿ, 5 ಕೋಟಿ ಮೌಲ್ಯದ ಜಾಗವನ್ನ ಕೇವಲ 15 ಲಕ್ಷ ರೂಪಾಯಿಗೆ ಕೊಡಿಸಿದ್ರು. ಕಟ್ಟಡ ನಿರ್ಮಾಣಕ್ಕೆ ವೈಯಕ್ತಿಕವಾಗಿ ನಾನು ಕೂಡ ದೊಡ್ಡ ಮೊತ್ತ ನೀಡಿದ್ದೇನೆ. ಎಲ್ಲರೂ ಸೇರಿ ಬೆಳಗಾವಿ ಕಾಂಗ್ರೆಸ್ ಕಚೇರಿ ಕಟ್ಟಿದ್ದು. ಯಾರೋ ಒಬ್ಬರಿಂದ ಪಕ್ಷದ ಕಚೇರಿ ನಿರ್ಮಾಣ ಆಗಿದ್ದಲ್ಲ ಎಂದು ಸತೀಶ್‌ ಜಾರಕಿಹೊಳಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌ ವಿರುದ್ಧ ಸತೀಶ್‌ ಜಾರಕಿಹೊಳಿ ದೂರು ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಬೆಳಗಾವಿ ರಾಜಕಾರಣ ತಾರಕಕ್ಕೇರಿದೆ. ಡಿ.ಕೆ ಶಿವಕುಮಾರ್‌ ವಿರುದ್ಧ ಸತೀಶ್ ಜಾರಕಿಹೊಳಿ ಸಿಡಿಮಿಡಿಗೊಂಡಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಗೆ ಡಿ.ಕೆ ಶಿವಕುಮಾರ್‌ ವಿರುದ್ಧ ದೂರು ನೀಡಿದ್ದಾರೆ. ಬೆಳಗಾವಿ ಪಾಲಿಟಿಕ್ಸ್‌ಗೆ ಮತ್ತೆ ಡಿ.ಕೆ ಶಿವಕುಮಾರ್‌ ಎಂಟ್ರಿ ಕೊಡ್ತಿದ್ದಾರೆ ಎಂದು ಹೈಕಮಾಂಡ್‌ ನಾಯಕರ ಎದುರು ದೂರು ಹೇಳಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್‌ ಇದೇ ರೀತಿ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರೆ, ನಾವ್ಯಾರು ಸುಮ್ಮನೆ ಇರಲು ಸಾಧ್ಯವಿಲ್ಲ. ನಾವು ಕೂಡ ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ. ಅದಕ್ಕಾಗಿ ಕಠಿಣ ಸಂದೇಶ ರವಾನೆ ಮಾಡಬೇಕಾಗುತ್ತದೆ ಎಂದಿದ್ದಾರೆ ಸತೀಶ್‌ ಜಾರಕಿಹೊಳಿ. ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸುರ್ಜೇವಾಲಗೆ ದೂರು ನೀಡಿದ್ದಾರೆ.

Sankranthi Celebration :ಸಂಕ್ರಾಂತಿ ಅದ್ಧೂರಿ ಸುಗ್ಗಿ-ಹುಗ್ಗಿ ಹಬ್ಬದ ಸಂಭ್ರಮ #pratidhvani

ಬೆಳಗಾವಿ ರಾಜಕಾರಣದಲ್ಲಿ ಮತ್ತೆ ಡಿ.ಕೆ ಶಿವಕುಮಾರ್‌ ಎಂಟ್ರಿ ಆಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಹೆಚ್ಚು ಆಸಕ್ತಿ ವಹಿಸ್ತಿದ್ದಾರೆ. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೆ. ಆದರೂ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗು ಡಿ.ಕೆ ಶಿವಕುಮಾರ್‌ ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಸಿ.ಟಿ ರವಿ ಕೇಸ್‌ನಲ್ಲಿ ಅಧಿಕಾರಿಗಳ ದುರುಪಯೋಗ ಮಾಡಿಕೊಂಡಿದ್ದಾರೆ. ಗಾಂಧಿ ಭಾರತ ಕಾರ್ಯಕ್ರಮದಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮಾತ್ರ ಹೆಚ್ಚಿನ ಪ್ರಾಶಸ್ತ್ಯ ನೀಡ್ತಿದ್ದಾರೆ. ಕಾಂಗ್ರೆಸ್‌ ಕಚೇರಿ ನಿರ್ಮಾಣಕ್ಕೆ ನಾನು ದೊಡ್ಡ ಮೊತ್ತ ನೀಡಿದ್ದೇನೆ. ಯಾರೋ ಒಬ್ಬರಿಂದ ಕಚೇರಿ ನಿರ್ಮಾಣ ಆಗಿದ್ದಲ್ಲ. ಡಿಕೆಶಿ ಪದೇ ಪದೇ ಎಂಟ್ರಿ ಕೊಡ್ತಿದ್ರೆ ನಾವ್ಯಾರು ಸುಮ್ಮನೆ ಇರಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೂ ಒಂದು ಗಂಟೆಗಳ ಕಾಲ ಸಭೆ ಮಾಡಿರುವ ಸತೀಶ್‌ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ರಾಜಕಾರಣ ಜಟಾಪಟಿ ಸರ್ಕಾರಕ್ಕೆ ಸಂಕಟ ತರುತ್ತೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಭವಿಷ್ಯ ನುಡಿದಿದ್ದಾರೆರ. ಬೆಳಗಾವಿ ಪಾಲಿಟಿಕ್ಸ್‌ನಿಂದ ಈ ಸರ್ಕಾರ ಹೋಗುತ್ತದೆ. ಈ ಹಿಂದೆಯೂ ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ ಆಗಿತ್ತು ಎಂದು ಮೈತ್ರಿ ಸರ್ಕಾರ ಪತನವನ್ನು ಉಲ್ಲೇಖಿಸಿ ವಿಪಕ್ಷ ನಾಯಕರ ಭವಿಷ್ಯ ನುಡಿದಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ vs ಸತೀಶ್‌ ಜಾರಕಿಹೊಳಿ ಕಿತ್ತಾಟ ಜೋರಾಗಿದ್ದು, ಕಾಂಗ್ರೆಸ್‌ನಲ್ಲಿ ಕುರ್ಚಿ ಫೈಟ್‌ನಿಂದ ಸರ್ಕಾರ ಪತನ ನಿಶ್ಚಿತ ಎಂದಿದ್ದಾರೆ.

Tags: Belagavict ravi lakshmi hebbalkarct ravi on lakshmi hebbalkarct ravi vs lakshmi hebbalkarLakshmi hebbalkarlakshmi hebbalkar accidentlakshmi hebbalkar carlakshmi hebbalkar car accidentlakshmi hebbalkar escapes unhurt in car accidentlakshmi hebbalkar healthlakshmi hebbalkar health conditionlakshmi hebbalkar in hospitallakshmi hebbalkar latest newslakshmi hebbalkar newslakshmi hebbalkar speechlakshmi hebbalkar today news
Previous Post

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ – ಅಪರಿಚಿತ ಕಂಟೇನರ್ ವಾಹನ ಚಾಲಕನ ವಿರುದ್ಧ FIR  ! 

Next Post

ಕಾಂಗ್ರೆಸ್‌ ಸೇರಲು ದೊಡ್ಡ ನಾಯಕರಿಂದಲೇ ಆಹ್ವಾನ ಬಂದಿರುವುದು ಸತ್ಯ..

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
Next Post
ಕಾಂಗ್ರೆಸ್‌ ಸೇರಲು ದೊಡ್ಡ ನಾಯಕರಿಂದಲೇ ಆಹ್ವಾನ ಬಂದಿರುವುದು ಸತ್ಯ..

ಕಾಂಗ್ರೆಸ್‌ ಸೇರಲು ದೊಡ್ಡ ನಾಯಕರಿಂದಲೇ ಆಹ್ವಾನ ಬಂದಿರುವುದು ಸತ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada