• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿ ಅಧಿವೇಶನ: ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಮಂಡನೆ(VIDEO)

ಪ್ರತಿಧ್ವನಿ by ಪ್ರತಿಧ್ವನಿ
December 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ 2024 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿತು.

ADVERTISEMENT

ಕಲಾಪದ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಪ್ರಸ್ತಾವವನ್ನು ಮಂಡಿಸಿದರು. ಇದಕ್ಕೆ ಅನುಮೋದನೆ ದೊರೆತ್ತಿದ್ದು, ಕಾರ್ಮಿಕರ ಕಲ್ಯಾಣಕ್ಕೆ ಅನುಕೂಲವಾಗುವ ಉಪಕ್ರಮವನ್ನು ಈ ಮಸೂದೆ ಒಳಗೊಂಡಿದೆ.

2024 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕವನ್ನು ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಯಿತು.

ಈ ಪ್ರಸ್ತಾವಕ್ಕೆ ಅನುಮೋದನೆ ದೊರೆತಿದ್ದು, ಮಸೂದೆಯ ಬಗ್ಗೆ ಸದನಕ್ಕೆ ವಿವರ ನೀಡಲಾಯಿತು. ಕಾರ್ಮಿಕರ ಕಲ್ಯಾಣಕ್ಕೆ ಈ ಮಸೂದೆ ಸಹಾಯ ಮಾಡಲಿದ್ದು, ಸಾಕಷ್ಟು ಸೌಲಭ್ಯಗಳನ್ನು… pic.twitter.com/vIEe2LHfGy

— Santosh Lad Official (@SantoshSLadINC) December 17, 2024

ಪ್ರಸ್ತಾವ ಮಂಡಿಸಿದ ನಂತರ ವಿವರ ನೀಡಿದ ಸಚಿವ ಲಾಡ್‌ ಅವರು, ಈ ತಿದ್ದುಪಡಿಯು ಈಗಾಗಲೇ ಇರುವ ಕಾಯ್ದೆಗೆ ತಿದ್ದುಪಡಿಯಾಗಿದ್ದು, ಐದನೇ ತಿದ್ದುಪಡಿಯಾಗಿದೆ. ಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಸೌಲಭ್ಯ ಒದಗಿಸಲು ಅನುಕೂಲವಾಗಲಿದೆ. ಸಮುದಾಯ ಭವನ, ಶೈಕ್ಷಣಿಕ ನೆರವು, ವೈದ್ಯಕೀಯ ನೆರವು, ಹೆರಿಗೆ ಭತ್ಯೆ, ಕ್ರೀಡಾ ಚಟುವಟಿಕೆಗೆ ಸಹಾಯ ಹೆಚ್ಚಳವಾಗಬೇಕು ಎಂದು ಹಲವು ಶಾಸಕರು ಬೇಡಿಕೆ ಇಟ್ಟಿದ್ದರು. ಈಗ ಉದ್ಯೋಗಿ, ಉದ್ಯೋಗದಾತ ಮತ್ತು ಸರ್ಕಾರದ ಪಾಲು ಹೆಚ್ಚಳವಾಗಿರುವುದರಿಂದ ಸಾಮಾಜಿಕ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗಲಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರಾದ ಡಾ. ಸಿ ಎನ್‌ ಅಶ್ವತ್ಥ ನಾರಾಯಣ ಅವರು, ಇದೊಂದು ಉತ್ತಮ ಕ್ರಮ ಎಂದರು. ಅಸಂಘಟಿತ ಕಾರ್ಮಿಕರಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಈ ಕುರಿತು ಮಾತನಾಡಿದ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್‌ ಅವರು, ಸಚಿವ ಸಂತೋಷ್‌ ಲಾಡ್‌ ಅವರು ಹಲವು ಉದ್ದೇಶಗಳನ್ನು ಇಟ್ಟುಕೊಂಡು ಈ ತಿದ್ದುಪಡಿ ಪ್ರಸ್ತಾವ ಇಟ್ಟಿದ್ದಾರೆ.ಅವರಿಗೆ ಒಳ್ಳೆಯ ಆಲೋಚನೆಗಳಿವೆ. ಅವರಿಗೆ ಉದ್ಯಮದ ಬಗ್ಗೆ ಅರಿವಿದೆ ಎಂದರು.

ಶಾಸಕ ಆರಗ ಜ್ಞಾನೇಂದ್ರ, ಶೈಲೇಂದ್ರ ಸೇರಿದಂತೆ ಹಲವು ಶಾಸಕರು ಕೆಲವು ಸಲಹೆಗಳನ್ನು ನೀಡಿದರು. ಅಡುಗೆ ಕಾರ್ಮಿಕರಿಗೆ ಸಹ ಸಾಮಾಜಿಕ ಸೌಲಭ್ಯಗಳನ್ನು ನೀಡಬೇಕು ಎಂದು ಸದಸ್ಯರೊಬ್ಬರು ತಿಳಿಸಿದರು. ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಸಚಿವ ಲಾಡ್‌ ಅವರು ವಿವರ ನೀಡಿದರು.

Tags: Assembly approvesBelgaum.Congress PartyKarnataka Labor Welfare Fund Amendment Bill.Labor Minister Santosh LadLabour Minister Santosh Lad presented the bill.Shailendra gave some suggestions.
Previous Post

ಡಿ ಬಾಸ್‌ ಅಂತಾ ಹೋದ..ಬೇಲ್‌ ಸಿಕ್ಕಿದೆ ಶ್ಯೂರಿಟಿ ಸಿಗ್ತಿಲ್ಲ..ಕಣ್ಣೀರು

Next Post

ನಾರಾಯಣ ಮೇಲೆ ರೊಚ್ಚಿಗೆದ್ದ ಕಾಂಗ್ರೆಸ್‌ ನಾಯಕರು..!

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post

ನಾರಾಯಣ ಮೇಲೆ ರೊಚ್ಚಿಗೆದ್ದ ಕಾಂಗ್ರೆಸ್‌ ನಾಯಕರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada