ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಮೇಲೆ ಕೋಪಿಸಿಕೊಂಡು ಜಗದೀಶ್ ಶೆಟ್ಟರ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ರು. ಆದ್ರೆ ಇದೀಗ ಮತ್ತೆ ಕಾಂಗ್ರೆಸ್ ತೊರೆದು ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಲಕಸಭಾ ಕ್ಷೇತ್ರದಿಂದ ಸ್ಪರ್ಧಿಸೋ ಇಂಗಿತ ವ್ಯಕ್ತಪಡಿಸಿದ್ರು. ಆದ್ರೆ ಬಿಜೆಪಿ ಹೈಕಮಾಂಡ್ ಅಹ್ ಕ್ಷೇತ್ರದ ಟಿಕೆಟ್ ನ ಪ್ರಹ್ಲಾದ್ ಜೋಶಿಗೆ ಫೈನಲ್ ಮಾಡಿತ್ತು. ಹೀಗಾಗಿ ಜಗದೀಶ್ ಶೆಟ್ಟರ್ ಮುಂದಿನ ನಡೆ ಏನು ಎಂಬ ಕುತೂಹಲ ಇತ್ತು.
ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ನೀಡಬೇಕು ಅನ್ನೋದು ಹೈಕಮಾಂಡ್ ನಿರ್ಧಾರವಾಗಿತ್ತು. ಆದ್ರೆ ಬೆಳಗಾವಿಯಿಂದ ಸ್ಪರ್ಧೆ ಮಾಡೋದಕ್ಕೆ ಶೆಟ್ಟರ್ ಹಿಂದೇಟು ಹಾಕಿದ್ರು. ಬೆಳಗಾವಿ ಕಾರ್ಯಕರ್ತರು ಕೂಡ ಸ್ಥಳೀಯರಿಗೆ ಟಿಕೆಟ್ ಕೊಡಿ ಎಂದು ಆಗ್ರಹಿಸಿದ್ರು. ಹಾಗಿದ್ರೆ ಜಗದೀಶ್ ಶೆಟ್ಟರ್ ಆಯ್ಕೆ ಏನು ಅನ್ನೋ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಕೇನೊಗೂ ಬೆಳಗಾವಿಯಿಂದಲೇ ಸ್ಪರ್ಧೆ ಮಾಡೋದಕ್ಕೆ ಶೆಟ್ಟರ್ ಓಕೆ ಅಂದಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದು , ಜಗದೀಶ್ ಶೆಟ್ಟರ್ ಬೆಳಗಾವಿ ಇಂದ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಈಗಾಗಲೆ ಅವರ ಮನವೊಲಿಸಿದ್ದೇವೆ. ಬೆಳಗಾವಿಯಲ್ಲಿ ಅವರಿಗೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.