ತಾವು ಪ್ರತಿನಿಧಿಸುವ ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ.
ಅಂಜಲಿ ಅವರು ಭಾನುವಾರ ಖಾನಾಪುರದಿಂದ ಬೆಳಗಾವಿ ಸುವರ್ಣ ಸೌಧದವರೆಗೆ ಪಾದಯಾತ್ರೆ ಆರಂಭಿಸಿದ್ದರು. ನಿನ್ನೆ ರಾತ್ರೆ ಯಳ್ಳೂರಿನಲ್ಲಿ ತಂಗಿ ಬೆಳಿಗ್ಗೆ ಪಾದಯಾತ್ರೆ ಮುಂದುವರಿಸಿದ ಅವರೊಂದಿಗೆ ಅಲಾರವಾಡ ಕ್ರಾಸ್ ಬಳಿ ಸಿದ್ದರಾಮಯ್ಯ ಹಾಗೂ ಶಾಸಕರೂ ಆಗಿರುವ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ‘ಖಾನಾಪುರ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. ಬಹಳಷ್ಟು ಮಂದಿ ಮನೆ ಕಳೆದುಕೊಂಡಿದ್ದಾರೆ. ಆದರೆ, ಸರ್ಕಾರದ ನಿರ್ಲಕ್ಷ್ಯದ ಪರಿಣಾಮ ಅಲ್ಲಿನ ಶಾಸಕರು ಒಂದು ಮನೆಯನ್ನೂ ಕೊಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಸೆಳೆಯಲಾಗುವುದು. ಕಲಾಪದಲ್ಲಿ ಚರ್ಚಿಸಲಾಗುವುದು’ ಎಂದರು.
ಈ ಹೋರಾಟ ಖಾನಾಪುರದಿಂದ ಬೆಳಗಾವಿಯ ಸುವರ್ಣಸೌದವರೆಗೆ ನಡೆಯಲಿದ್ದು ಅಧಿವೇಶನಕ್ಕೆ ಕಾಲ್ನಡಿಗೆಯಲ್ಲೇ ಬರಲಿದ್ದಾರೆ.
ಅಧಿವೇಶನದಲ್ಲಿ ಪ್ರಶ್ನೋತ್ತರ ಮತ್ತು ಶೂನ್ಯವೇಲೆಯ ತರುವಾಯ ಪ್ರಸ್ತಾಪಿಸಲು ನಿಲುವಳಿ ಸೂಚಿಸಿದ ಸಿದ್ದರಾಮಯ್ಯ –








