ಗಣಿ ನಾಡು ಬಳ್ಳಾರಿಯ ಮಹಾನಗರ ಪಾಲಿಕೆ ಚುನಾವಣೆ ಇಂದು ನಡೆದು ಪಾಲಿಕೆ ಅಧಿಕಾರದ ಗದ್ದುಗೆ ಕಾಂಗ್ರೆಸ್ ಪಾಲಾಗಿದೆ.
ಹೌದು. ಇದು ಗಣಿ ನಾಡು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಚುನಾವಣೆ ನಡೆದಿದ್ದು, ಬಳ್ಳಾರಿ ನಗರದ ಪ್ರಥಮ ಪ್ರಜೆ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಮೇಯರ್ ಆಗಿ 34ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ ಆಗಿ 37ನೇ ವಾರ್ಡ್‌ನ ಮಾಲನ್ ಬೀ ಶನಿವಾರ ಆಯ್ಕೆಯಾಗಿದ್ದಾರೆ.
ಒಟ್ಟು 39 ಸದಸ್ಯರ ಬಲ ಇರೋ ಪಾಲಿಕೆಯಲ್ಲಿ 21 ಕಾಂಗ್ರೆಸ್ 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರು ಇದ್ದಾರೆ. ಪಕ್ಷದ 21 ಸದಸ್ಯರು ಹಾಗೂ ಐವರು ಪಕ್ಷೇತರ ಸದಸ್ಯರೊಂದಿಗೆ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

ಪಾಲಿಕೆಯಲ್ಲಿ ಬಹುಮತ ಇಲ್ಲ ಎಂಬುದು ಗೊತ್ತಿದ್ದೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಸಚಿವ ಶ್ರೀರಾಮುಲು ಆಪರೇಷನ್‌ಗೆ ಕೈ ಹಾಕುವುದಿಲ್ಲ ಎನ್ನುತ್ತಿದ್ದರೆ, ಶಾಸಕ ಸೋಮಶೇಖರ್ ರೆಡ್ಡಿ ಬೆಂಬಲ ನೀಡಿದವರಿಗೆ ಉಪಮೇಯರ್ ಹುದ್ದೆ ನೀಡಲಾಗುವುದು ಎಂದು ಬಹಿರಂಗವಾಗಿ ಆಮಿಷ ಒಡ್ಡಿದ್ದರು.