ಬೀದರ: ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯವರಿಗೆ ರಾಜ್ಯ ಸರಕಾರದಿಂದಲೇ 6% ಬಡ್ಡಿ ಸಹಾಯಧನ ನೀಡುವ ಯೋಜನೆಗೆ ಅಗತ್ಯ ಮಾರ್ಗಸೂಚಿಗಳೊಂದಿಗೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿರುವುದರಿಂದ ರೈತ ಮಹಿಳೆಯರು ಸಮೀಪದ ಪಶುವೈದ್ಯ ಸಂಸ್ಥೆಗೆ ಭೇಟಿ ನೀಡಿ, ಯೋಜನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಜೊತೆಗೆ ಪಶು ಪಾಲನಾ ಇಲಾಖೆ ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಕೃತ / ಸಹಕಾರಿ ಬ್ಯಾಂಕಗಳಿಗೆ ಸಂಪರ್ಕಿಸಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಯ್ಯಾರಿಸಿ, ಯೋಜನೆಯ ಲಾಭವನ್ನು ಒದಗಿಸಕೊಡಲು ಕ್ರಮ ಕೈಗೊಳ್ಳುತ್ತಾರೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.